ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತಂತೆ ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
BIG NEWS: ಇಂದು ತೆಲಂಗಾಣಕ್ಕೆ ಪ್ರಧಾನಿ ಮೋದಿ: ಈ ಬಾರಿಯೂ ತಮ್ಮ ಶಿಷ್ಟಾಚಾರ ಉಲ್ಲಂಘಿಸಲಿರುವ ಸಿಎಂ ಕೆಸಿಆರ್
ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಜೆ ಜಾರ್ಜ್ ಹಾಗೂ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಕುರಿತಂತೆ ಚರ್ಚೆ ನಡೆದಿದೆ.
ಸಭೆಯಲ್ಲಿ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಕುರಿತಂತೆ ಚರ್ಚೆ ನಡೆದಿದ್ದು, ಸಿದ್ದರಾಮಯ್ಯಗೆ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ. 50:50 ಸೂತ್ರ ಮುಂದಿಟ್ಟುಕೊಂಡು ಸಿದ್ದರಾಮಯ್ಯಗೆ ಮೊದಲ ಎರಡೂವರೆ ವರ್ಷ ಸಿಎಂ ಸ್ಥಾನ ನೀಡಿ ಎಂದು ಸಿದ್ದರಾಮಯ್ಯ ಬೆಂಬಲಿಗರು ಸುರ್ಜೆವಾಲಾ ಎದುರು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.
ಸಿದ್ದರಾಮಯ್ಯಗೆ ಇದು ಕೊನೆಯ ಚುನಾವಣೆ, ಒಳ್ಳೆ ಆಡಳಿತ ನೀಡಿದ್ದು, ಎಲ್ಲ ಸಮುದಾಯದಿಂದ ಮೆಚ್ಚುಗೆ ಪಡೆದ ಸಿದ್ದರಾಮಯ್ಯಗೆ ಮೊದಲ ಆಧ್ಯತೆ ನೀಡಬೇಕು. ಹೀಗಾದರೆ ಮಾತ್ರ ಚುನಾವಣೆಯಲ್ಲಿ ನಾವು ಮೇಲುಗೈ ಸಾಧಿಸಬಹುದು ಎಂದು ಸಿದ್ದು ಬೆಂಬಲಿಗರು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಈ ಪ್ರಸ್ತಾಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯರನ್ನು ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ರೆ ಇತರೆ ಸಮುದಾಯಗಳು ಮತ ಹಾಕಲ್ಲ. ಚುನಾವಣೆ ಮೇಲೆ ಅಡ್ಡಪರಿಣಾಮ ಬೀರುತ್ತೆ. ಹೀಗಾಗಿ ಯಾರನ್ನೂ ಸಿಎಂ ಅಭ್ಯರ್ಥಿ ಘೋಷಣೆ ಮಾಡಿದೇ ಸಾಮಾಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಬೇಕು ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.