ಶಿವಮೊಗ್ಗ: : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ( Kuvempu University ) ವ್ಯಾಪ್ತಿಯಲ್ಲಿ ಇಂದು ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್ ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.
BIGG NEWS : ಅಂಜನಾದ್ರಿಯ ಸಮಗ್ರ ಅಭಿವೃದ್ದಿಗೆ 120 ಕೋಟಿ ರೂ. ಬಿಡುಗಡೆ : ಸಚಿವೆ ಶಶಿಕಲಾ ಜೊಲ್ಲೆ
ಮತ್ತೊಂದೆಡೆ ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.
ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
BIGG NEWS : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ : ಕಂಟೇನರ್ ಗೆ ಕಾರು ಡಿಕ್ಕಿಯಾಗಿ 5 ಜನ ಸ್ಥಳದಲ್ಲೇ ಸಾವು