ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕ್ಷಣ ಗಣನೆ ಶುರುವಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನ ಸಾಗರವೇ ಹರಿದು ಬರುತ್ತಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ 75 ನೇ ಜನ್ಮದಿನದ ಅಂಗವಾಗಿ ಆಗಸ್ಟ್ 3 ರ ಇಂದು ದಾವಣಗೆರೆಯಲ್ಲಿ ಜನ್ಮದಿನ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಾವಣಗೆರೆ ಸರ್ವ ರೀತಿಯಲ್ಲೂ ಸಜ್ಜಾಗಿದೆ.
ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಸುಮಾರು 7-8 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, ದಾವಣಗೆರೆಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಒಡೆತನದ 50 ಎಕರೆ ವಿಸ್ತೀರ್ಣದ ಶಾಮನೂರು ಪ್ಯಾಲೇಸ್ ಗ್ರೌಂಡ್ ನಲ್ಲಿ ಅಮೃತ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ.
ಸಿದ್ದರಾಮಯ್ಯರ 75ನೇ ಜನ್ಮದಿನದ ಅಮೃತ ಮಹೋತ್ಸವ ಹಿನ್ನೆಲೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸ್ತಬ್ಧವಾಗಿದ್ದು, 3 ಕಿಲೋಮೀಟರ್ವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ.
BIGG NEWS: ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವು : 40 ಜನರು ಅಸ್ವಸ್ಥ