ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

BIGG NEWS: ಮೂರನೇ ಅವಧಿಗೆ ಬ್ರೆಜಿಲ್ ಅಧ್ಯಕ್ಷರಾಗಿ ‘ಲೂಲಾ ಡಾ ಸಿಲ್ವಾ’ ಪ್ರಮಾಣ ವಚನ ಸ್ವೀಕಾರ | Brazil’s President

ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಬಾಲ್ಯ ವಿವಾಹ ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಗಳಿಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ ಎನ್ನಲಾಗಿದೆ.

BIGG NEWS : ಶೀಘ್ರವೇ `: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ದ 25 ಅಭ್ಯರ್ಥಿಗಳ ಘೋಷಣೆ

Share.
Exit mobile version