ಕಾರವಾರ: ಆರ್ಥಿಕ ಪರಿಸ್ಥಿತಿ, ಆರೋಗ್ಯ ಪರಿಸ್ಥಿತಿ ಸುಧಾರಿಸಿಕೊಳ್ಳಬೇಕಾದ್ರೆ ನೀವು ಕ್ರೈಸ್ತಧರ್ಮಕ್ಕೆ ಮತಾಂತರ ಆಗಿ ಅಂತ ಆಮೀಶ ಒಡ್ಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಜಗಳ ಮನೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆದರ್ಶ ನಾಯ್ಕ ಎನ್ನುವವರು ನೀಡಿದ ದೂರು ಆಧಾರಿಸಿ ಸಿರಸಿ ಗ್ರಾಮೀಣ ಠಾಣಾ ಸಿಬ್ಬಂದಿಯವರು ಶಾಲಿನಿ ರಾಣಿ, ಕುಮಾರ ರಾಣಿ, ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದಾರೆ ಅಂತ ತಿಳಿದು ಬಂದಿದೆ.