ಹುಬ್ಬಳ್ಳಿ : ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಕೆಲವು ಮಹತ್ವದ ಬಿಲ್ ತರುತ್ತಿದ್ದೇವೆ. ಎಸ್ಸಿ, ಎಸ್ಟಿ ಮೀಸಲಾತಿ ಜಾರಿ ಬಿಲ್ ಪ್ರಮುಖವಾಗಿ ಚರ್ಚೆಗೆ ಬರಲಿದೆ. ಬೆಳಗಾವಿ ಅಧಿವೇಶನದಲ್ಲಿ ಆರ್ಡಿನೆನ್ಸ್ ರೀ ಪೇಮೆಂಟ್ ಬಿಲ್ ಬರುತ್ತದೆ. ಉತ್ತರ ಕರ್ನಾಟಕ ಭಾಗದ ಪ್ರಮುಖ ವಿಚಾರಗಳು ಚೆರ್ಚೆಗೆ ಬರಲಿದ್ದು, ಅದಕ್ಕೆ ಸರ್ಕಾರ ಉತ್ತರ ನೀಡಲಿದೆ ಎಂದು ಹೇಳಿದರು.
SHOCKING NEWS: ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡ್ತಿದ್ದ ಪತಿಯ ಮರ್ಮಾಂಗ ಕತ್ತರಿಸಿದ ಪತ್ನಿ
ನಾಳೆ ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಾವ್ ಸಮಾವೇಶವನ್ನು ಆಯೋಜಿಸಿರುವ ಕುರಿತಂತೆ ಎಂಇಎಸ್ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಎಂಇಎಸ್ ಪುಂಡಾಟ ಇದೇ ಮೊದಲಲ್ಲ.. 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಾ ಬಂದಿದೆ. ಅವರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ಎಂದು ಗೊತ್ತಿಲ್ಲ. ನಾವು ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.