ಮೈಸೂರು: ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಸಮೀಪಿಸುತ್ತಿರುವ ಹೊತ್ತಲ್ಲೇ ಹೆಚ್. ವಿಶ್ವನಾಥ್ ಅವರು ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಿದ್ಧತೆ ನಡೆಸಿದ್ದು, ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್, ಸದ್ಯದಲ್ಲೇ ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತಂತೆ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.