ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ.

Good News : ದಸರಾ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಗುಡ್ ನ್ಯೂಸ್ : `KSRTC’ ಯಿಂದ 2000 ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ

ದಸರಾ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಕನ್ನಡ ನಾಡಿನ ಎಲ್ಲ ಸಹೋದರ, ಸಹೋದರಿಯರಿಗೆ ದಸರಾ ಹಬ್ಬದ ಶುಭಾಶಯಗಳು, ಚಾಮುಂಡೇಶ್ವರಿ ದೇವಿಗೆ ನನ್ನ ಹೃದಯಪೂರ್ವಕ ನಮನಗಳು. ಮಹಿಷಾಸುರನ ವಧೆ ಮಾಡಿದ ಬಗ್ಗೆ ಉಲ್ಲೇಖವಿದೆ. ಚಾಮುಂಡೇಶ್ವರಿ ಆಶೀರ್ವಾದ ಎಲ್ಲರಿಗೂ ಸಿಗಲಿ. ದಸರಾ ಉದ್ಘಾನಟನೆಗೆ ಅವಕಾಶ ಮಾಡಿಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಧ್ಯನವಾದಗಳನ್ನು ತಿಳಿಸುತ್ತೇನೆ ಎಂದರು.

ಮೈಸೂರು ದಸರಾ ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ದಸರಾ ಹಬ್ಬವು ಹಲವು ಸಂಸ್ಕೃತಿಯ ಜೊತೆಗೆ ಬೆಸದುಕೊಂಡಿದೆ. ಬಸವಣ್ಣ, ಅಲ್ಲಮಪ್ರಭು ಆದರ್ಶ ವ್ಯಕ್ತಿಗಳಾಗಿದ್ದು. ಬಸವಣ್ಣನವರ ವಚನಗಳು ಜನತಂತ್ರಕ್ಕೆ ಮಾದರಿಯಾಗಿವೆ. ಈಗಲೂ ಬಸವಣ್ಣನವರ ವಚನಗಳನ್ನು ಭಕ್ತಿಪೂರ್ವಕವಾಗಿ ಕೇಳಲಾಗುತ್ತದೆ ಎಂದರು.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಮೈಸೂರು ಪೇಟಾ ತೊಡಿಸಿ ಸನ್ಮಾನಿಸಲಾಗಿದ್ದು, ತಾಯಿ ಚಾಮುಂಡಿಯ ಬೆಳ್ಳಿ ಮೂರ್ತಿಯನ್ನು ನೀಡಿ ಗೌರವಿಸಲಾಗಿದೆ.

Share.
Exit mobile version