ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೂ ಅವಕಾಶ ಕೊಡಿ ಎಂದು ಹುಬ್ಬಳ್ಳಿ ಪಾಲಿಕೆ ಆಯುಕ್ತರಿಗೆ ಮನವಿ ಮಾಡಲಾಗಿದ್ದು, ಈ ಬಗ್ಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಟಿಪ್ಪು ಜಯಂತಿ ಆಚರಣೆಗೆ ಅವಕಾಶ ಕೋರಿದ್ದು ಖಂಡನೀಯ, ಇಸ್ಲಾಂನಲ್ಲಿ ಅಲ್ಲಾ ಬಿಟ್ಟರೇ ಬೇರೆ ಯಾರನ್ನೂ ಪೂಜಿಸುವುದಿಲ್ಲ. ಮುಸ್ಲಿಮರಲ್ಲೇ ಜಯಂತಿಯನ್ನು ಒಪ್ಪುತ್ತಿಲ್ಲ. ಕಾಂಗ್ರೆಸ್ ಕುಮ್ಮಕ್ಕಿನಿಂದ ಟಿಪ್ಪು ಜಯಂತಿ ಮಾಡುತ್ತಿದ್ದಾರೆ. ಮತಾಂಧನ ಜಯಂತಿ ಆಚರಣೆ ಮಾಡಲು ನಾವು ಬಿಡುವುದಿಲ್ಲ. ಪಾಲಿಕೆ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ಕೊಡಬಾರದು. ಟಿಪ್ಪು ಜಯಂತಿಗೆ ಅವಕಾಶ ಕೊಟ್ರೆ ಸಂಘರ್ಷಕ್ಕೆ ದಾರಿ ಆಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನದಲ್ಲಿ ಟಿಪ್ಪು ಸುಲ್ತಾನ್ 272ನೇ ಜಯಂತಿಗೆ ಅವಕಾಶ ಕೊಡಿ ಎಂದು AIMIM ಹಾಗೂ ಸಮತಾ ಸೈನಿಕದಳ ಕಾರ್ಯಕರ್ತರು ಮನವಿ ಮಾಡಿದ್ದಾರೆ.