ಧಾರವಾಡ : ಪ್ರತಿ ವರ್ಷದಂತೆ ಸರಕಾರಿ ನೌಕರರ ಜಿಲ್ಲಾ ಕ್ರೀಡಾಕೂಟವನ್ನು ಈ ವರ್ಷವು ಜನವರಿ 3 ಮತ್ತು 4 ರಂದು ಯಶಸ್ವಿಯಾಗಿ ಸಂಘಟಿಸಲು ಜಿಲ್ಲಾಡಳಿತ ಸಿದ್ದತೆ ಆರಂಭಿಸಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಓಓಡಿ ಸೌಲಭ್ಯ ನೀಡಲಾಗುವುದು. ಎಲ್ಲ ಇಲಾಖೆಗಳ ನೌಕರರು ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ತಿಳಿಸಿದ್ದಾರೆ.
BIGG NEWS : ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ
ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾಡಳಿತ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ಜರುಗಿದ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಯ ಪೂರ್ವಸಿದ್ದತಾ ಸಭೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಸಂಘಟಿಸಲಾಗುತ್ತದೆ. ವಯಕ್ತಿಕ ಮತ್ತು ಗುಂಪು ಆಟಗಳನ್ನು ಸಂಯೋಜಿಸಲಾಗಿದೆ. ಎಲ್ಲ ಇಲಾಖೆಗಳು ಕ್ರೀಡಾಕೂಟ ಆಯೋಜನೆಗೆ ಸಹಕಾರ ನೀಡಬೇಕು ಎಂದು ಅವರು ಹೇಳಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದೈಹಿಕ ಶಿಕ್ಷಕರ ನಿಯೋಜನೆಗೆ ಕ್ರಮವಹಿಸಬೇಕು. ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಗೆ ವೈದ್ಯಕೀಯ ಪ್ರಥಮ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಡಬೇಕೆಂದು ಅವರು ಸೂಚಿಸಿದರು.
ಕ್ರೀಡಾಕೂಟಕ್ಕೆ ಪೆÇಲೀಸ್ ಇಲಾಖೆಯಿಂದ ಪೆÇಲೀಸ್ ಬ್ಯಾಂಡ್ ಮತ್ತು ಭದ್ರತಾ ವ್ಯವಸ್ಥೆ ಒದಗಿಸಬೇಕು. ಉಳಿದಂತೆ ಎಲ್ಲ ಇಲಾಖೆ ಅಧಿಕಾರಿಗಳು ಕ್ರೀಡಾಕೂಟದಲ್ಲಿ ತಪ್ಪದೇ ಪಾಲ್ಗೊಳ್ಳಬೇಕೆಂದು ಅವರು ತಿಳಿಸಿದರು.
ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ಸುತ್ತೋಲೆ ಅನುಸಾರ ಪ್ರಸಕ್ತ ಸಾಲಿನ ನೌಕರ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಸಂಘಟನಾ ಸಭೆಯ ನಿರ್ದಾರದಂತೆ ಬರುವ ಜನವರಿ 3 ಮತ್ತು 4, 2023 ರಂದು ಕ್ರೀಡಾಕೂಟ ಆಯೋಜಿಸಲು ನಿರ್ಧರಿಸಲಾಗಿದೆ. ಈಗಾಗಲೇ ಆಸಕ್ತ ನೌಕರರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ.
ಕ್ರೀಡಾಕೂಟವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತದೆ. ಕ್ರೀಡಾಂಗಣ ಸಿದ್ದತೆ ಆರಂಭವಾಗಿದೆ. ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೌಕರ ಭವನ ಹಾಗೂ ಆಲೂರ ವೆಂಕಟರಾವ್ ಭವನದಲ್ಲಿ ಸಂಘಟಿಸಲಾಗುವುದು ಎಂದು ಅವರು ತಿಳಿಸಿದರು.
ಕ್ರೀಡಾಕೂಟದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರಿಗೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 25 ರ ವರೆಗೆ ವಿಸ್ತರಿಸಲಾಗಿದೆ. ಕ್ರೀಡಾಕೂಟ ಯಶಸ್ವಿಯಾಗಿ ಸಂಘಟಿಸಲು ಸರ್ಕಾರದ ಎಲ್ಲ ಇಲಾಖೆಗಳು ಸಾಧ್ಯವಾದಷ್ಟು ಅನುದಾನ ಬಿಡುಗಡೆ ಮಾಡಬೇಕೆಂದು ಅವರು ತಿಳಿಸಿದರು.