ಭ್ರಷ್ಟಾಚಾರ ನಿಗ್ರಹ ದಳವನ್ನು (ACB) ವಜಾಗೊಳಿಸಿ ಮತ್ತು ಅದರ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ.
BIGG NEWS : ಪೊಲೀಸ್ ಇಲಾಖೆ ಸಿಬ್ಬಂದಿಯ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಡಿಜಿಪಿ ಸುತ್ತೋಲೆ
ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆಂಜನಮೂರ್ತಿಯವರು ನಡವಳಿಯನ್ನು ಹೊರಡಿಸಿದ್ದು, ಭ್ರಷ್ಟಾಚಾರ ತಡೆ ಅಧಿನಿಯ 1988ರನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಲುವಾಗಿ ಹಾಗೂ ಪ್ರಕರಣಗಳನ್ನು ಸ್ವತಂತ್ರವಾಗಿ ತನಿಖೆ ಮಾಡಲು ವಿವಿಧ ವೃಂದದ ಹುದ್ದೆಗಳೊಂದಿಗೆ ಒಂದು ಪ್ರತ್ಯೇಕ ಭ್ರಷ್ಟಾಚಾರ ನಿಗ್ರಹದಳವನ್ನು ( Anti Corruption Bureau – ACB ) ಸೃಜಿಸಲಾಗಿತ್ತು ಎಂದು ತಿಳಿಸಿದ್ದಾರೆ.
Good News : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಆನ್ ಲೈನ್ ನಲ್ಲೇ ಸಿಗಲಿವೆ ಈ 17 ಸೇವೆಗಳು
ದಿನಾಂಕ 11-08-2022ರಂದು ಮಾನ್ಯ ಉಚ್ಚನ್ಯಾಯಾಲಯವು ನೀಡಿರುವ ತೀರ್ಪಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದೆ. ಎಸಿಬಿ ರದ್ದುಗೊಳಿಸಿ, ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪಬಂಧ 2(ಎಸ್) ರನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಠಾಣಾಧಿಕಾರವನ್ನು ನೀಡಿ ಆದೇಶಿಸಿದ್ದ ಸರ್ಕಾರದ ಅಧಿಸೂಚನೆಗಳನ್ನು ಪುನರುಜ್ಜೀವನಗೊಳಿಸಿ ಆದೇಶಿಸಿದ್ದಾರೆ.
ಈ ಹಿನ್ನಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಲಾಗಿದ್ದ ತನಿಖಾಧಿಕಾರ, ಪೊಲೀಸ್ ಠಾಣೆಗಳೆಂದು ಘೋಷಿಸಿ, ರಾಜ್ಯವ್ಯಾಪಿ ಅಧಿಕಾರ ನೀಡಿರುವ ಆದೇಶಗಳನ್ನು ಹಿಂಪಡೆದಿದೆ. ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪ್ರಸ್ತುತ ಬಾಕಿಯಿರುವ ತನಿಖೆಗಳು, ವಿಚಾರಣೆಗಳು, ಇತರೆ ಶಿಸ್ತು ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸುವಂತೆ ಸೂಚಿಸಲಾಗಿದೆ.
ವರದಿ : ವಸಂತ ಬಿ ಈಶ್ವರಗೆರೆ