ಬೆಂಗಳೂರು : ನಟ ಸುದೀಪ್ ಹುಟ್ಟುಹಬ್ಬದ ಸಂಭ್ರಮ ಹಿನ್ನೆಲೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ʻಪುಣ್ಯಕೋಟಿʼ ರಾಯಭಾರಿಯಾಗಿ ಕಿಚ್ಚ ಸುದೀಪ್ ನೇಮಕ ಮಾಡಲಾಗಿದೆ ಎಂದು ಸಚಿವ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮಾಹಿತಿ ನೀಡಿದ್ದಾರೆ.
ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ ಹೈನುಗಾರಿಕೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ ಸಾರ್ವಜನಿಕರಲ್ಲಿ ಸ್ಪೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.
BIGG BREAKING NEWS: ಶ್ರೀಗಳ ಬಂಧನ ಬಳಿಕ ಎ2 ಆರೋಪಿ ವಾರ್ಡನ್ ರಶ್ಮಿ ಬಂಧನ
ಪುಣ್ಯಕೋಟಿ ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.