ಬೆಂಗಳೂರು : ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಭಾರತದಲ್ಲೂ ಆತಂಕ ಶುರುವಾಗಿದ್ದು, ಕೇಂದ್ರ ಸರ್ಕಾರವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ್ದು, ಡಿಸೆಂಬರ್ 26 ರ ಸೋಮವಾರ ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ.
Rules Changes 1st January 2023 : ಗ್ರಾಹಕರೇ ಗಮನಿಸಿ : ಹೊಸ ವರ್ಷದಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು
ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರವು ಈಗಾಗಲೇ ಮಾರ್ಗಸೂಚಿ ಪ್ರಕಟಿಸಿದ್ದರೆ, ರಾಜ್ಯ ಸರ್ಕಾರವು ಇಂದು ಉನ್ನತ ಮಟ್ಟದ ಸಭೆ ಕರೆದಿದೆ. ಸಭೆಯ ನಂತರ ವಿಸ್ತೃತ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.