ಬೆಂಗಳೂರು : ರಾಜ್ಯ ಸರ್ಕಾರವು ತುಮಕೂರು, ಹಾಸನ ಸೇರಿದಂತೆ 7 ಜಿಲ್ಲೆಗಳಲ್ಲಿ ರೈತರಿಂದ ಬೆಂಬಲ ಬೆಲೆಯಡಿ ಉಂಡೆ ಕೊಬ್ಬರಿ ಖರೀದಿಸಲು ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಎಫ್ ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಕ್ವಿಂಟಲ್ ಗೆ 11,750 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಅದರಂತೆ ರಾಜ್ಯದ ತುಮಕೂರು,ಚಿಕ್ಕಮಗಳುರು, ಹಾಸನ, ಮಂಡ್ಯ, ಮೈಸೂರು, ಚಿತ್ರದುರ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಂದ ಗರಿಷ್ಠ 54,750 ಮೆಟ್ರಿಕ್ ಟನ್ ಉಂಡೆ ಕೊಬ್ಬರಿ ಖರೀದಿಸಲು ಅನುಮತಿ ನೀಡಲಾಗಿದೆ.
ಪ್ರತಿ ಎಕರೆಗೆ ಗರಿಷ್ಠ 6 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಪ್ರಮಾಣ ನಿಗದಿಪಡಿಸಲಾಗಿದೆ. ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯಲ್ಲೂ 6 ತಿಂಗಳವರೆಗೆ ನಿಗಧಿಪಡಿಸಲಾಗಿದೆ.
BREAKING NEWS : ಇಂಡಿಗೋ ವಿಮಾನದಲ್ಲಿ ಮತ್ತೆ ಎಮರ್ಜೆನ್ಸಿ ಬಾಗಿಲು ಓಪನ್ ಮಾಡಿದ ಪ್ರಯಾಣಿಕ!