ಬೆಂಗಳೂರು : ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘ ನಗರ ಪ್ರೀಂಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ.
ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿದ ಹಿನ್ನೆಲೆ ಎನ್ ಪಿ ಎಸ್ ನೌಕರರ ಸಂಘ ನಗರ ಪ್ರೀಂಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಕೈ ಬಿಟ್ಟಿದೆ.
ಸಿಎಂ ಬೊಮ್ಮಾಯಿ ಸೂಚನೆಯಂತೆ ಪ್ರತಿಭಟನಾ ಸ್ಥಳಕ್ಕೆ ಸಚಿವ ಸುಧಾಕರ್ ಇಂದು ಆಗಮಿಸಿ ಮಾತನಾಡಿದರು ಎನ್ ಪಿ ಎಸ್ ರದ್ದಿನ ಕುರಿತು ಸಿಎಂ ಸಂಘದ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಮತ್ತು ವಿಷಯವನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಚರ್ಚಿಸುವ ಕುರಿತು ತೀರ್ಮಾನ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆ ಎನ್ ಪಿ ಎಸ್ ನೌಕರರ ಸಂಘ ನಗರ ಪ್ರೀಂಡಂ ಪಾರ್ಕ್ ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ನಿಲ್ಲಿಸಿದೆ.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮು ‘ ಇಂದು ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದೇನೆ, ಆದರೆ ಹೋರಾಟ ನಿಲ್ಲಿಸುವುದಿಲ್ಲ ,ಧರಣಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
‘ಜೆಡಿಎಸ್’ ರಾಜ್ಯದ ಆರೂವರೆ ಕೋಟಿ ಜನರ ‘ATM’ : ಅಮಿತ್ ಶಾ ಹೇಳಿಕೆಗೆ ಹೆಚ್ಡಿಕೆ ತಿರುಗೇಟು
ಪ್ರವೀಣ್ ಅತ್ಮಹತ್ಯೆ ಕೇಸ್ ನಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ ವಿರುದ್ಧ FIR: ಈ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?