ಬೆಳಗಾವಿ : ಮುಂದಿನ ತಿಂಗಳು ಸುವರ್ಣ ಸೌಧದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಅಡಿಗಲ್ಲು ಇಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚನ್ನಮ್ಮನ್ನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರ ಮನವೊಲಿಸಿ ಜಮೀನು ಸ್ವಾಧೀನಪಡಿಸಿಕೊಂಡು ಈಗಿರುವ ಚನ್ನಮ್ಮನ ಕೋಟೆಯ ಪಕ್ಕದಲ್ಲೇ ಅರಮನೆಯ ಪ್ರತಿರೂಪ ನಿರ್ಮಿಸಲಾಗುವುದು. ಶಿಥಿಲಾವಾಸ್ಥೆಯಲ್ಲಿರುವ ಕೋಟೆಯ ಜೀರ್ಣೋದ್ದಾರಕ್ಕೆ 27 ಕೋಟಿ ರೂ. ಅನುದಾನ ಕಿತ್ತೂ ಅಭಿವೃದ್ಧಿ ಪ್ರಾಧಿಕಾರಕ್ಕೆ ತೆಗೆದಿರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಿತ್ತೂರು ಬಳಿ ಕೆಐಎಡಿಬಿ ಜಾಗದಲ್ಲಿ 1,000 ಎಕೆರೆ ಕೈಗಾರಿಕಾ ಟೌನ್ ಶಿಪ್ ನಿರ್ಮಿಸಲು ನಿರ್ಧರಿಸಲಾಗಿದ್ದು, ಇದರಿಂದ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.