ಬೆಂಗಳೂರು : ರಾಜ್ಯದಲ್ಲಿ ನವಜಾತ ಶಿಶು, ತಾಯಿಯಂದಿರ ಮರಣ ಪ್ರಮಾಣ ಇಳಿಕೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
BIGG NEWS: ರಸ್ತೆ ಗುಂಡಿಗೆ ಮಹಿಳೆ ಬಲಿ: ಪೊಲೀಸರಿಂದ ವರದಿ ಕೇಳಿದ ಸಿಎಂ ಬೊಮ್ಮಾಯಿ..!
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಕಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಸಚಿವ ಮಾಧುಸ್ವಾಮಿ, ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ನವಜಾತ ಶಿಶು ಹಾಗೂ ತಾಯಿಂದರ ಮರಣ ಪ್ರಮಾಣ ಹೆಚ್ಚಿದೆ. ಇದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದರು.
ಜಿಲ್ಲೆಗಳಲ್ಲಿನ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಗಂಭೀರವಾಗಿ ಚರ್ಚೆಯಾಗಿದೆ. ಐಎಂಆರ್, ಎಂ.ಎಂ.ಆರ್ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ. ಜಮೀನು ವಿಚಾರದಲ್ಲಿ ಬಗರ್ ಹುಕುಂ ಸಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ, ಬರ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಅಭಿವೃದ್ಧಿ ಆಗಿರುವ ರಸ್ತೆಗಳು ಹಾಳಾಗಿದ್ದರೆ ಕನಿಷ್ಠ ಓಡಾಡಲು ಜಾಗ ಮಾಡಿಕೊಡಬೇಕು. ಹಳ್ಳಿಗಳಲ್ಲಿ ಸ್ಮಶಾನ ಇಲ್ಲದಿದ್ದರೇ ಸರ್ಕಾರದ ಅಥವಾ ಖಾಸಗಿ ಜಾಗ ಗುರುತಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದರು. ಮಣ್ಣು ಸವಕಳಿಯಿಂದ ಹಾನಿಗೊಳಗಾದವರಿಗೂ ಪರಿಹಾರ ನೀಡಬೇಕು. ಪಿಎಂ ಸ್ವನಿಧಿ ಅಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಹಣ ಮಂಜೂರು ಮಾಡಲು ಸೂಚನೆ ನೀಡಲಾಗಿದೆ.. ತಾಲ್ಲೂಕು ಮಟ್ಟದ ಪ್ರಕರಣಗಳನ್ನು ಸ್ಥಳದಲ್ಲೇ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.