ಬಾಗಲಕೋಟೆ:  ಸೋಲಾರ ಮತ್ತು ಪವನ ಶಕ್ತಿ ಮೂಲಕ ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಐಬಿ ಪಾರ್ಕ ನಿರ್ಮಾಣ ಮಾಡಲಾಗುತ್ತಿದೆ ಎಂದು ಇಂಧನ ಸಚಿವರಾದ ವಿ.ಸುನೀಲ್‍ಕುಮಾರ ಹೇಳಿದರು.

ಕಾಮನ್‌ವೆಲ್ತ್ ಗೇಮ್ಸ್‌: ಲಾನ್ ಬೌಲ್ಸ್‌ನಲ್ಲಿ ಚಿನ್ನ ಗೆದ್ದ ಭಾರತೀಯ ಮಹಿಳಾ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ!

  ಮುಧೋಳ ತಾಲೂಕಿನ ಚಿತ್ರಭಾನುಕೋಟೆ-ಹೆಬ್ಬಾಳ ಮತ್ತು ಮುಗಳಖೋಡದಲ್ಲಿ 110 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯುತ್ ಕೊರತೆಯನ್ನು ನೀಗಿಸಲು ಕೇಂದ್ರ ಸರಕಾರದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣವನ್ನು ಹೆಚ್ಚಿಸಲು ರಾಜ್ಯದಲ್ಲಿ ಐಬಿ ಪಾರ್ಕ ನಿರ್ಮಾಣ ಮಾಡಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ಘೋಷಣೆ ಮಾಡಿದ್ದಾರೆ ಎಂದರು.

Good News : ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ

  ಅಧಿಕಾರ ವಹಿಸಿಕೊಂಡ ಒಂದು ವರ್ಷದಲ್ಲಿ ಇಂಧನ ಇಲಾಖೆಯಲ್ಲಿ ಬದಲಾವಣೆ ತರುವ ಮೂಲಕ ಗ್ರಾಹಕ ಸ್ನೇಹಿ, ರೈತ ಸ್ನೇಹಿ ಹಾಗೂ ಉದ್ಯಮ ಸ್ನೇಹಿ ಈ ಮೂರು ವರ್ಗಗಲ್ಲಿ ಅಭಿವೃದ್ದಿ ಪಡಿಸಲಾಗಿದೆ. ಸಮಸ್ಯೆಗಳನ್ನು ಕಾಲಮಿತಿಯೊಳಗೆ ಬಗೆಹರಿಸಲಾಗಿದೆ. ಬೆಳಕು ಯೋಜನೆಯಡಿ ವಿದ್ಯುತ್ ರಹಿತ ಮನೆಗಳಿಗೆ ಸಂಪರ್ಕ ನೀಡಲಾಗಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ 18 ಸಾವಿರ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ. ಸ್ವಾತಂತ್ರ್ಯದ ವರ್ಷಾಚರಣೆ ಹಿನ್ನಲೆಯಲ್ಲಿ ಮನೆ ಮನೆಗೆ ವಿದ್ಯುತ್ ಕೊಡುವ ಕೆಲಸ ಮಾಡಲಾಗಿದೆ ಎಂದರು.

 ರಾಜ್ಯದಲ್ಲಿ 24 ಗಂಟೆಯೊಳಗೆ ಟಿಸಿ ಬದಲಾವಣೆಗೆ ಕ್ರಮವಹಿಸಲಾಗಿದೆ. 160 ಕಡೆ ಟಿಸಿ ಬ್ಯಾಂಕ್, ರಿಪೇರಿ ಸೆಂಟರ್ 8 ಕಡೆ ಮಾಡಲಾಗಿದೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ ಸಂಪರ್ಕ ನೀಡುವ ಮೂಲಕ ರಾಜ್ಯದಲ್ಲಿ ಶೇ.90ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ವರ್ಗದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಈ ಯೋಜನೆಯಡಿ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ. ಇನ್ನು 145 ಕಡೆಗಳಲ್ಲಿ ಹೊಸದಾಗಿ ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ ಮುಧೋಳ ತಾಲೂಕಿನ 4 ಗ್ರಾಮಗಳಲ್ಲಿ ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದ್ದು, ಈ ಪೈಕಿ ಹೆಬ್ಬಾಳ ಮತ್ತು ಮುಗಳಖೋಡದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿದೆ. ರಾಜ್ಯದಲ್ಲಿ 32 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಇದ್ದು, ಈ ಪೈಕಿ 18 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಕೊಡಲಾಗುತ್ತಿದೆ. ದಿನದ 24 ಗಂಟೆ ವಿದ್ಯುತ್ ನೀಡಲು ಹೊಸದಾಗಿ ಉಪ ಕೇಂದ್ರಗಳ ಸ್ಥಾಪನೆಯಾಗಬೇಕಾಗಿದೆ ಎಂದು ತಿಳಿಸಿದರು.

  ರಾಜ್ಯ ಸರಕಾರ 10 ಲಕ್ಷ ರೈತರ ಪಂಪಸೆಟ್‍ಗಳಿಗೆ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡುತ್ತಿದೆ. ಇದಕ್ಕಾಗಿ ವರ್ಷಕ್ಕೆ ಪ್ರತಿ ರೈತರಿಗೆ 80 ಸಾವಿರ ಖರ್ಚು ಮಾಡಲಾಗುತ್ತಿದೆ. ಹೊಸ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ ಸೌಭಾಗ್ಯ ಯೋಜನೆಯಡಿ 11 ಸಾವಿರ ಕುಟುಂಬಕ್ಕೆ ವಿದ್ಯುತ್ ನೀಡಲಾಗಿದೆ. 11 ಕೆವಿಯ 17 ಕಿ.ಮೀ ಹೊಸ ಲೈನ್ ಅಳವಡಿಕೆ, 143 ಟ್ರಾನ್ಸಫಾರ್ಮರ್ ಬದಲಾವಣೆ ಹಾಗೂ 166 ಕಿ.ಮೀ ಕಂಡಕ್ಟರ ಬದಲಾವಣೆ ಮಾಡಲಾಗಿದೆ ಎಂದರು. 2018-19 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿರುವ 5368 ಪಂಪಸೆಟ್‍ಗಳನ್ನು ಸಕ್ರಮಗೊಳಿಸಲಾಗಿದೆ ಎಂದರು.

Share.
Exit mobile version