ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಪತ್ತೆಗೆ ಕಡಿವಾಣ ಹಾಕಬೇಕು. ಭ್ರೂಣ ಪತ್ತೆ ಹಚ್ಚುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
BIGG NEWS: ನನಗೇನು ಸಚಿವನಾಗು ಅರ್ಹತೆ ಇಲ್ಲವಾ.? : ಸಚಿವಸ್ಥಾನಕ್ಕಾಗಿ ಸಿಡಿದೆದ್ದ ಬಿಜೆಪಿ ಶಾಸಕ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರೂಣ ಪತ್ತೆಗ ಕಡಿವಾಣ ಹಾಕಬೇಕು. ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚು ಮಾಡಬೇಕಿದೆ. ಹೆಣ್ಣುಮಕ್ಕಳಿಗೆ ಸಮಾನ ಹಕ್ಕು ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೋಳ್ಳುವುದು. ಜೊತೆಗೆ ಭ್ರೂಣ ಪತ್ತೆ ಮಾಡುವ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಡಾ.ಕೆ. ಸುಧಾಕರ್, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.
BIGG NEWS : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬೊಮ್ಮಾಯಿ ಹೇಳಿದ್ದೇನು?