ಧಾರವಾಡ: ಜನರ ಕಲ್ಯಾಣಕ್ಕಾಗಿ ಮತ್ತು ಜಿಲ್ಲೆಯ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ವಿಶೇಷ ಕಾಳಜಿಯಿಂದ ಜಿಲ್ಲೆಗೆ ತರಲಾಗಿದೆ. ಯೋಜನೆಗಳಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ, ಅವ್ಯವಹಾರ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಹಾಗೂ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಲಾಭ ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವರು ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷರು ಆಗಿರುವ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ದಿಶಾ ಸಭೆಯ ಅಧ್ಯಕ್ಷತೆವಹಿಸಿ, ಮಾತನಾಡಿದರು. ಕೇಂದ್ರ ಸರಕಾರದ ಎಲ್ಲ ಯೋಜನೆಗಳು ಪೂರ್ಣಪ್ರಮಾಣದಲ್ಲಿ ಜಾರಿಯಾಗಬೇಕು. ಅನುμÁ್ಠನ ಕುರಿತು ಯಾವುದೇ ಇಲಾಖೆ, ಯೋಜನೆಗಳ ಕುರಿತು ದಿಶಾ ಸಮಿತಿ ಸದಸ್ಯರು ಮಾಹಿತಿ ಕೇಳಿ ಕಚೇರಿಗೆ ಬಂದರೆ, ಅಗತ್ಯ ಮಾಹಿತಿ ಪೂರೈಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಬೆಳೆಹಾನಿ ಪರಿಹಾರ ವಿತರಣೆ ಪ್ರಗತಿಯಲ್ಲಿದ್ದು, ಬೆಂಬಲ ಬೆಲೆ ಯೋಜನೆಯಡಿ ಹೆಸರು ಮತ್ತು ಉದ್ದಿನ ಕಾಳು ಖರೀದಿ ಕಾರ್ಯ ನಡೆದಿದೆ. ರೈತರಿಗೆ ಅಧಿಕಾರಿಗಳು ಸರಿಯಾದ ಮಾಹಿತಿ ಮತ್ತು ಸಹಕಾರ ನೀಡಬೇಕೆಂದು ಅವರು ತಿಳಿಸಿದರು.
ಪಿಎಂಜಿಎಸ್ ವೈ ಯೋಜನೆಯಡಿ ಜಿಲ್ಲೆಯಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸಬೇಕು. ರಸ್ತೆ ನಿರ್ಮಾಣದಲ್ಲಿ ಕಳಪೆ ಗುಣಮಟ್ಟ ಕಂಡುಬಂದಲ್ಲಿ ಸಂಬಂದಿಸಿದ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
BIGG NEWS : ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು : ಮಗನ ಅಂಗಾಂಗ ದಾನದಿಂದ 8 ಮಂದಿಯ ಬಾಳಿಗೆ ಬೆಳಕು!
ಜಲಶಕ್ತಿ, ಜಲಜೀವನ ಮಿಷನ್, ಹರ್ ಘರ್ ಜಲ್ ಯೋಜನೆಗಳು ಅತ್ಯಂತ ಉತ್ತಮವಾಗಿ ಜಿಲ್ಲೆಯಲ್ಲಿ ಜಾರಿಯಾಗುತ್ತಿದೆ. ಇದರ ಇಂಪ್ಯಾಕ್ಟ್ ಕುರಿತು ಅಧ್ಯಯನ ಮಾಡಿ ವರದಿ ಕಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ರಾಜ್ಯ ಸಮಾಜ ಕಲ್ಯಾಣ ಸಚಿವರ ವಿಶೇಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಿಸಲು ರೂ.2 ಕೋಟಿ ಬಿಡುಗಡೆ ಆಗಿದ್ದರೂ ಇಲ್ಲಿವರೆಗೂ ಕಾರ್ಯ ಆರಂಭಿಸದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸಂಬಂಧಿಸಿದ ಏಜನ್ಸಿ ಅವರು ಬೇಗ ಕಾಮಗಾರಿ ಆರಂಭಿಸಲು ನಿರ್ದೇಶಿಸಿದರು.
ಸರಕಾರದ ಯೋಜನೆಗಳ ಸಹಾಯಧನ, ಅನುದಾನ ಬಿಡುಗಡೆ ಮಾಡಲು ಬ್ಯಾಂಕ್ದವರು ಸಿಬಿಲ್ ಸ್ಕೋರ್ ಕೇಳದಂತೆ ಕೇಂದ್ರ ಆರ್ಥಿಕ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದ್ದರಿಂದ ಬ್ಯಾಂಕ್ಗಳು ಈ ಕುರಿತು ಜನರಿಗೆ ತಿಳುವಳಿಕೆ ನೀಡಿ, ಫಲಾನುಭವಿಗಳಿಗೆ ವಿಳಂಬ ಮಾಡದೆ ನಿಯಮಾನುಸಾರ ಸಾಲ ಮಂಜೂರು ಮಾಡಬೇಕೆಂದು ಸಚಿವರು ಹೇಳಿದರು.
ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಬಿ ಆಗಲು ಕೈಗಾರಿಕಾ ಇಲಾಖೆಯಿಂದ ಮುದ್ರಾ ದಂತಹ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಅರ್ಹರಿಗೆ ಸಿಗುವಂತೆ ಬ್ಯಾಂಕ್ ಮತ್ತು ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ, ಕೆಲಸ ಮಾಡಬೇಕು ಎಂದರು. ಜುಬ್ಲಿ ಸರ್ಕಲ್ದಿಂದ ನರೇಂದ್ರ ಕ್ರಾಸ್ವರೆಗಿನ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಬೀದಿ ದೀಪ ಅಳವಡಿಕೆ, ರಸ್ತೆ ವಿಭಜಕ ಮತ್ತು ರಸ್ತೆ ಬದಿ ಚರಂಡಿ ನಿರ್ಮಾಣ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಜಿಲ್ಲೆಯಲ್ಲಿ ಅಮೃತಸರೋವರ ಯೋಜನೆ ಅಡಿಯಲ್ಲಿ ಈಗಾಗಲೇ 26 ಕೆರೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಇನ್ನು 80 ಕೆರೆಗಳ ನಿರ್ಮಾಣ ಹಾಗೂ ಪುನರುಜ್ಜೀವನ ಕಾರ್ಯ ಆರಂಭಿಸಲು ಕ್ರಮವಹಿಸಲಾಗಿದೆ. ಇದು ಕೇಂದ್ರ ಸರಕಾರದ ಅತ್ಯಂತ ಮಹತ್ವದ ಯೋಜನೆಯಾಗಿದೆ ಎಂದು ಸಚಿವರು ಹೇಳಿದರು.
ಅತಿಯಾದ ಮಳೆಯಿಂದಾಗಿ ಅನೇಕ ಜನರ ಮನೆಗಳಿಗೆ ಹಾನಿಯಾಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮನೆಗಳ ದುರಸ್ತಿ ಹಾಗೂ ಪುನರ್ ನಿರ್ಮಾಣಕ್ಕೆ ಸರಕಾರದಿಂದ ಅನುಮೋದನೆ ಸಿಗುತ್ತಿಲ್ಲ ಎಂದು ಶಾಸಕರಿಂದ ಮತ್ತು ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಇದರ ಕುರಿತು ರಾಜ್ಯದ ವಸತಿ ಸಚಿವರ ಹಾಗೂ ರಾಜೀವ ಗಾಂಧಿ ಹೌಸಿಂಗ್ ಕಾಪೆರ್Çರೇಷನ್, ಹಿರಿಯ ಅಧಿಕಾರಿಗಳ ಸಭೆಯನ್ನು ಬರುವ ನವೆಂಬರ್ 6 ರಂದು ಬೆಂಗಳೂರಿನಲ್ಲಿ ಸಭೆ ಆಯೋಜಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕಲಘಟಗಿ ತಾಲೂಕು ಕಚೇರಿಯಲ್ಲಿ ಭ್ರμÁ್ಟಚಾರ ಹೆಚ್ಚಾಗಿದ್ದು, ಸಾರ್ವಜನಿಕರಿಂದ ಸಂಸದರ ಕಚೇರಿಗೆ ದೂರುಗಳು ಬರುತ್ತಿವೆ. ಭ್ರμÁ್ಟಚಾರ ನಿಯಂತ್ರಿಸದಿದ್ದರೆ ತಹಶೀಲ್ದಾರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕಲಘಟಗಿ ತಹಶೀಲ್ದಾರ ಅವರಿಗೆ ಸಚಿವರು ಎಚ್ಚರಿಕೆ ನೀಡಿದರು.
ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ 2016-17 ರಿಂದ 2022-23 ರ ವರೆಗೆ 4639 ಮನೆಗಳ ನಿರ್ಮಾಣ ಗುರಿ ಹೊಂದಲಾಗಿದ್ದು, 4344 ಮನೆ ನಿರ್ಮಿಸಲು ಅನುಮೊದನೆ ನೀಡಲಾಗಿದೆ. ಈಗ 3548 ಮನೆಗಳ ನಿರ್ಮಾಣವಾಗಿದ್ದು, ಶೇ.81.68 ಭೌತಿಕ ಪ್ರಗತಿಯಾಗಿದೆ. ಇನ್ನು 796 ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಪೂರ್ಣ ಗುರಿ ಸಾಧಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಸಚಿವರು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ 144 ಗ್ರಾಮ ಪಂಚಾಯತ ಮಟ್ಟದಲ್ಲಿ ಸಂಜೀವಿನಿ ಸಂಘಗಳನ್ನು ಸ್ಥಾಪಿಸಲಾಗಿದೆ. 595 ವಾರ್ಡ್ ಮಟ್ಟದ ಒಕ್ಕೂಟಗಳನ್ನು ಮತ್ತು ಗ್ರಾಮಗಳಲ್ಲಿನ 5,276 ಸ್ವಸಹಾಯ ಸಂಘಗಳನ್ನು ಒಗ್ಗೂಡಿಸಲಾಗಿದೆ.
ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರಧಾನಮಂತ್ರಿ ಜೀವನ ಜ್ಯೋತಿ ಬೀಮಾ ಯೋಜನೆಯಲ್ಲಿ 36269 ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆಯಲ್ಲಿ 34021 ಜನ ನೋಂದಣಿ ಆಗಿದ್ದು, ಸರಕಾರದಿಂದ ಅನುಮೋದಿಸಲಾಗಿದೆ ಎಂದು ಸಚಿವರು ಸಭೆಯಲ್ಲಿ ತಿಳಿಸಿದರು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 1,65,547 ಉದ್ಯೋಗ ಚೀಟಿಗಳನ್ನು ನೀಡಲಾಗಿದೆ. ಸುಮಾರು 47,180 ಫಲಾನುಭವಿಗಳಿಂದ ಉದ್ಯೋಗ ಬೇಡಿಕೆ ಬಂದಿತ್ತು. 46,078 ಉದ್ಯೋಗ ಚೀಟಿದಾರರಿಗೆ ಉದ್ಯೋಗ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಜನಾಂಗದ ಫಲಾನುಭವಿಗಳು ಉದ್ಯೋಗ ಅರಸಿ, ವಲಸೆ ಹೋಗುವ ಸಾಧ್ಯತೆ ಇದ್ದು, ಈ ಕುರಿತು ಅಧಿಕಾರಿಗಳು ಜಾಗೃತಿವಹಿಸಿ, ಎಸ್.ಸಿ.ಮತ್ತು ಎಸ್.ಟಿ ಸಮುದಾಯದವರಿಗೆ ಸ್ಥಳದಲ್ಲಿ ಉದ್ಯೋಗ ದೊರೆಯುವಂತೆ ಮಾಡಬೇಕೆಂದು ಸಚಿವರು ತಿಳಿಸಿದರು.