ಬಳ್ಳಾರಿ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಮೆಟ್ರಿಕ್ ನಂತರದ ಕೊರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅಭ್ಯರ್ಥಿಗಳು ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬಹುದಾಗಿದೆ.
BIGG BREAKING NEWS : ಮುರುಘಾಶ್ರೀಗಳಿಗೆ ಜೈಲೇ ಗತಿ : ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ