ಮಡಿಕೇರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2022-23 ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ https://sevasindhu.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಹಿಂದಿನ ವರ್ಷದ ಅಂಕಪಟ್ಟಿ(ವಾರ್ಷಿಕ/ 2 ಸೆಮಿಸ್ಟರ್), ವಿದ್ಯಾರ್ಥಿಯ ಜಾತಿ ಮತ್ತು ಕುಟುಂಬ ಆದಾಯ ಪ್ರಮಾಣಪತ್ರ (ತಹಶೀಲ್ದಾರರಿಂದ), ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ, ಪ್ರಸಕ್ತ ವರ್ಷದ ಶುಲ್ಕ ರಶೀತಿ ಹಾಗೂ ಮಾಹೆವಾರು ಹಾಜರಾತಿ ಪಟ್ಟಿ ಕಡ್ಡಾಯವಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ, ಕಚೇರಿ ದೂ.ಸಂ.08272–225528/ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.