ಬಳ್ಳಾರಿ : ಪ್ರಸ್ತಕ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಆಹ್ವಾನಿಸಲಾದ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31 ಆಗಿರುತ್ತದೆ. ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಹೆಲ್ಪ್ಲೈನ್ ನಂ:8277799990ಗೆ ಸಂಪರ್ಕಿಸಬಹುದಾಗಿದೆ.
BIGG NEWS : ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಟಿಪ್ಪು ಕಾಲದ `ಸಲಾಂ ಮಂಗಳಾರತಿ’ ಹೆಸರು ಬದಲು!