ಮಡಿಕೇರಿ : ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಪ್ರಿ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ https://scholarships.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ.
BIGG NEWS : ಬಿ.ಎಸ್. ಯಡಿಯೂರಪ್ಪ ರಾಜಕೀಯ ನಿವೃತ್ತಿ ವಿಚಾರ : ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ, ದೂ.ಸಂ.08272-295829 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.