ಧಾರವಾಡ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಧಾರವಾಡ ಜಿಲ್ಲಾ ವ್ಯಾಪ್ತಿಯ 2022-23ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
BIGG NEWS : `ಪಿ.ಎಂ.ಕಿಸಾನ್ ಯೋಜನೆ’ಯಡಿ ಲಾಭ ಪಡೆಯದ ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
ಅರ್ಹ ಜಿಲ್ಲಾ ವ್ಯಾಪ್ತಿಯ 1ನೇ ತರಗತಿಯಿಂದ 10ನೇ ತರಗತಿವರೆಗಿನ ಮೆಟ್ರಿಕ್ ಪೂರ್ವದ ವಿಕಲಚೇತನ ವಿದ್ಯಾರ್ಥಿಗಳುhttps://ssp.karnataka.gov.in ಪೋರ್ಟಲ್ನಲ್ಲಿ ಹಾಗೂ ಮೆಟ್ರಿಕ್ ನಂತರದ ವಿಕಲಚೇತನ ವಿದ್ಯಾರ್ಥಿಗಳು https://ssp.postmatric.karnataka.gov.in ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ, ಹಾರ್ಡಕಾಫಿ ಪ್ರತಿಗಳನ್ನು ಸಂಬಂಧಪಟ್ಟ ತಾಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಗೆ ಜನೆವರಿ 15, 2023ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ:0836-2744474 ಮತ್ತು ತಾಲೂಕಾ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳಾದ ಧಾರವಾಡ-9742757903, ಹುಬ್ಬಳ್ಳಿ-9164347001 ಕಲಘಟಗಿ- 6363695794 ನವಲಗುಂದ-9663271200, ಕುಂದಗೋಳ-8880570833 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.