ಬೆಂಗಳೂರು: ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ ಮಾಡಲಾಗಿದೆ. ಸುಧಾ ಮೂರ್ತಿ ಕನ್ನಡ ಮತ್ತು ಇಂಗ್ಲಿಷ್ ನ ಬರಹಗಾರ್ತಿ, ಸುಧಾ ತಮ್ಮ ವೃತ್ತಿಪರ ಜೀವನವನ್ನು ಕಂಪ್ಯೂಟರ್ ವಿಜ್ಞಾನಿ ಮತ್ತು ಎಂಜಿನಿಯರ್ ಆಗಿ ಆರಂಭಿಸಿದರು. ಅವರು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ ಹಾಗೂ ‘ಬಿಲ್ ಗೇಟ್ಸ್ ಪ್ರತಿಷ್ಠಾನ’ದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರಾಗಿದ್ದಾರೆ
ಇವರು 1950ರಲ್ಲಿ ಧಾರವಾಡ ಜಿಲ್ಲೆಯ ‘ಶಿಗ್ಗಾಂವ್’ (ಜಿಲ್ಲೆಯ) (ಈಗ ಹಾವೇರಿ ಜಿಲ್ಲೆಯಲ್ಲಿದೆ) ಗ್ರಾಮದ ಕುಲಕರ್ಣಿ ಮನೆತನದಲ್ಲಿ 1950 ರ ಆಗಸ್ಟ್19, ರಂದು ಜನಿಸಿದರು. ಜಯಶ್ರೀ ದೇಶಪಾಂಡೆಸುಧಾಮೂರ್ತಿಯವರ ಸೋದರಿ. ಜಯಶ್ರೀ ದೇಶಪಾಂಡೆ ಮತ್ತು ಅವರ ಪತಿ, ಗುರುರಾಜ ದೇಶಪಾಂಡೆ, ಜೊತೆಗೂಡಿ ಉದ್ಯಮಶೀಲತೆ ಗುಣ ಬೆಳೆಸುವ ಮಹತ್ವದ ಉದ್ದೇಶದೊಂದಿಗೆ 1996ರಲ್ಲಿ ಹುಟ್ಟು ಹಾಕಿದ ‘ದೇಶಪಾಂಡೆ ಪ್ರತಿಷ್ಠಾನ’ ವಿನೂತನ ಕಾರ್ಯಕ್ರಮಗಳಿಂದಾಗಿ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ ಬದಲಾವಣೆಗೆ ಕಾರಣವಾಗಿದೆ.