ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದ ಬಳಿಯಲ್ಲಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
Good News : ಸುಶಾಸನ ಮಾಸಾಚರಣೆ : ಇಂದು 10 ಸಾವಿರ ಜನರಿಗೆ ಉದ್ಯೋಗ ಪತ್ರ
ಮಂಗಳೂರಿನ ಹೊರವಲಯದಲ್ಲಿರುವಂತ ಕಾಟಿಪಳ್ಳದ 4ನೇ ಬ್ಲಾಕ್ ನಲ್ಲಿ ದುಷ್ಕರ್ಮಿಗಳ ತಂಡವೊಂದು ಫ್ಯಾನ್ಸಿ ಸ್ಟೋರ್ ಮಾಲೀಕ ಅಬ್ದುಲ್ ಜಲೀಲ್ (45) ಎಂಬಾತನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ಜಲೀನ್ ನನ್ನು ಸಮೀಪಿದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಲೀಲ್ ಮೃತಪಟ್ಟಿದ್ದಾನೆ.
BIGG NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫ್ಯಾನ್ಸಿ ಸ್ಟೋರ್ ಮಾಲೀಕನ ಬರ್ಬರ ಹತ್ಯೆ : ಸ್ಥಳದಲ್ಲಿ ಬಿಗುವಿನ ವಾತಾವರಣ
ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಸೆಕ್ಷನ್ 144 ಹಾಕಲಾಗಿದೆ. ಮಂಗಳೂರಿನ ಸುರತ್ಕಲ್ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಸುರತ್ಕಲ್ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಸುರತ್ಕಲ್, ಬಜ್ಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ಡಿ.27 ಬೆಳಗ್ಗೆ 10 ರವರೆಗೂ ನಿಷೇಧ ಹೇರಲಾಗಿದೆ.