ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದರುಆಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ತೇವಾಂಶ ಹೆಚ್ಚಿರುವುದರಿಂದ ಚಳಿ ಹೆಚ್ಚಾಗಿದ್ದು, 15 ಡಿಗ್ರಿ ಸೆಂಟಿಗ್ರೆಡ್ಗಿಂತ ಕಳೆಗೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ವರಗೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ. ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ನಷ್ಟು ತಪಾಮಾನ ವರದಿಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.