ಬೆಳಗಾವಿ : ರಾಜ್ಯದ ಹಾವೇರಿ, ಧಾರವಾಡ, ಉಡುಪಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಜವಳಿ ಸಚಿವ ಶಂಕರ್ ಪಾಟೀಲ್ ಮುನೇಕೊಪ್ಪ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿಯ ಕೆ.ಎಸ್. ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಜವಳಿ ಉದ್ಯಮಕ್ಕೆ ಪ್ರೋತ್ಸಾಹಿಸಲು ಈಗಾಗಲೇ ಕೇಂದ್ರ ಹಾಗೂ ಸರ್ಕಾರದ ಯೋಜನೆ ಅಡಿ ಹಾವೇರಿ, ಧಾರವಾಡ, ಉಡುಪಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಜವಳಿ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜವಳಿ ನೀತಿ ಅನ್ವಯ ಪ್ರತ್ಯೇಕ ಉದ್ಯಮಿ/ಎಸ್ ವಿಪಿ ಕನಿಷ್ಟ 15 ಎಕರೆ ಜಾಗ ಹೊಂದಿ ಜವಳಿ ಪಾರ್ಕ್ ಸ್ಥಾಪನೆ ಮಾಡಲು ಮುಂದೆ ಬಂದಲ್ಲಿ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.
BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು!