ಬೆಂಗಳೂರು : ಮಕ್ಕಳ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪಿಯುಸಿಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
BIGG NEWS : ಸುಳ್ಯ ತಾಲೂಕಿನಲ್ಲಿ ಮತ್ತೆ ಭೂಕಂಪನದ ಅನುಭವ : ಜನರಲ್ಲಿ ಹೆಚ್ಚಿದ ಆತಂಕ
ಹೌದು, ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಕೆಲವು ಸುಧಾರಣೆಗಳನ್ನು ತರಲು ಮುಂದಾಗಿರುವ ಸರ್ಕಾರ 2023-24 ರಿಂದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸಿದೆ. ಇದು ಕೇವಲ ದ್ವಿತೀಯ ಪಿಯುಸಿಗೆ ಮಾತ್ರವಲ್ಲದೇ ಪ್ರಥಮ ಪಿಯುಸಿಗೂ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
BIG NEWS : ಜೆಎನ್ಯು ಕ್ಯಾಂಪಸ್ ಗೋಡೆಗಳ ಮೇಲೆ ʻಬ್ರಾಹ್ಮಣ ವಿರೋಧಿʼ ಬರಹ… ಫೋಟೋಗಳು ವೈರಲ್
ಇತ್ತೀಚೆಗೆ ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ ಸಿ ನಾಗೇಶ್ ನೇತೃತ್ವದಲ್ಲಿ ನಡೆದ ಪಿಯು ಇಲಾಖೆಯ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಯಾವ ನಿರ್ಧಾರವೂ ಅಂತಿಮವಾಗಿಲ್ಲ, ಮುಂದಿನ ಸಭೆಗಳಲ್ಲಿ ಈ ಬಗ್ಗೆ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಸಭೆಯಲ್ಲಿ ಕೆಲವು ಹಿರಿಯ ಅಧಿಕಾರಿಗಳು ಪಿಯುಸಿಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸುವಂತೆ ಪ್ರಸ್ತಾಪ ಮಾಡಿದ್ದಾರೆ. ಮಕ್ಕಳ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪಿಯುಸಿಯಲ್ಲಿ ಬಹುಪ್ರಶ್ನೆ ಮಾದರಿ ಅಳವಡಿಸಿದ್ರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.
ಮುಂದಿನ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಅನ್ನು ಸರ್ಕಾರ ಜಾರಿಗೆ ತರಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಆಯೋಜಿಸಿದ್ದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಮತ್ತು ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಅನ್ನು ಸರ್ಕಾರ ಜಾರಿಗೆ ತರಲಿದೆ. 75 ವರ್ಷಗಳ ನಂತರ ಸ್ವಾವಲಂಬಿ ಸಮಾಜಕ್ಕಾಗಿ ಎನ್ಇಪಿಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಬದಲಾವಣೆ ಇಂದಿನ ಅಗತ್ಯವಾಗಿದೆ. ಎನ್ಇಪಿ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮೊಘಲರು ಮತ್ತು ಬ್ರಿಟಿಷರು ಪರಿಚಯಿಸಿದ ವ್ಯವಸ್ಥೆಗಳು, ನೀತಿಗಳು ಮತ್ತು ಆಡಳಿತದ ವಿರುದ್ಧ ಭಾರತೀಯರು ಹೋರಾಡಿದ್ದರು ಎಂದು ತಿಳಿಸಿದ್ದಾರೆ.