ಕೆಎನ್ಎನ್ಡಿಜಿಟಲ್ ಡೆಸ್ಕ್ : ವಾಣಿವಿಲಾ ಸಾಗರ ಜಲಾಶಯದ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಪಡುವ ಕಾರಣವಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು, “ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಜ್ಞರು ಸಮಿತಿಯು ಅಣೆಕಟ್ಟೆಗೆ ಭೇಟಿ ಕೊಟ್ಟಿದ್ದು ವಾಣಿವಿಲಾಸ ಸಾಗರ ಜಲಾಶಯದ ಅಣೆಕಟ್ಟೆಯನ್ನು ಸಮಗ್ರವಾಗಿ ಪರಿಶೀಲಿಸಿ, ಪರಿವೀಕ್ಷಿಸಿ ಅಣೆಕಟ್ಟೆಯ ಯಾವುದೇ ಭಾಗದಲ್ಲಿ ನೀರು ಸೋರುವಿಕೆ ಇಲ್ಲವೆಂದು ಹಾಗೂ ಅಣೆಕಟ್ಟೆಯ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲವೆಂದು ವರದಿ ನೀಡಿರುತ್ತಾರೆ” ಎಂದರು.
ಇನ್ನು “ಕೇಂದ್ರ ಜಲ ಆಯೋಗದ ಶಿಫಾರಸ್ಸಿನಂತೆ ವಾಣಿವಿಲಾಸ ಸಾಗರ ಅಣೆಕಟ್ಟೆಯಲ್ಲಿ ಅತಿ ಹೆಚ್ಚು ಸಂಭವನೀಯ ಪ್ರವಾಹ ಪರಿಸ್ಥಿತಿ 35,000 ಕ್ಯೂಸೆಕ್ಸ್ ಇದ್ದು, ಪ್ರಸ್ತುತ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರು ಸುಮಾರು 15 ಸಾವಿರ ಕ್ಯೂಸೆಕ್ಸ್ ಇದೆ. ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿರುವುದರಿಂದ ಅಣೆಕಟ್ಟೆಯ ಗರಿಷ್ಠ ಮಟ್ಟ 142 ಅಡಿ ಇರುವ ಇರುವುದರಿಂದ ಪ್ರಸ್ತುತ ನೀರಿನ ಸಂಗ್ರಹಣೆ 135 ಅಡಿ ಇರುವುದರಿಂದ ಅಣೆಕಟ್ಟೆಗೆ ತಜ್ಞರು ತಿಳಿಸಿದ್ದಾರೆಂದು ಭದ್ರಾ ಮೇಲ್ದಂಡೆ ಯೋಜನಾ ವಲಯದ ಮುಖ್ಯ ಇಂಜಿನಿಯರ್ ವರದಿ ಸಲ್ಲಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಆತಂಕಕ್ಕೆ ಕಾರಣವಿಲ್ಲ” ಎಂದು ಹೇಳಿದರು.