ಬೆಂಗಳೂರು : ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ.
ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು.#ಮಹಿಳಾವಿರೋಧಿಕಾಂಗ್ರೆಸ್
— BJP Karnataka (@BJP4Karnataka) August 13, 2022
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ಲೇವಡಿ ಮಾಡಿದೆ.
ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ "ತಮ್ಮ ಮನೆಯ ಹೆಂಚು ತೂತು" ಎಂಬುದೇ ಗೊತ್ತಿಲ್ಲ.
ಇವರು ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು?#ಮಹಿಳಾವಿರೋಧಿಕಾಂಗ್ರೆಸ್ pic.twitter.com/MQSd9gB8bc
— BJP Karnataka (@BJP4Karnataka) August 13, 2022
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಆಗ್ರಹಿಸಿದೆ.
ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ.
ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ?
ಕೂಡಲೇ ಕ್ಷಮೆಯಾಚಿಸಿ.#ಮಹಿಳಾವಿರೋಧಿಕಾಂಗ್ರೆಸ್ pic.twitter.com/lTpZkAvNwr
— BJP Karnataka (@BJP4Karnataka) August 13, 2022