ಕೊಪ್ಪಳ : ನಾಡಿನ ಹೆಸರಾಂತ ಜಾತ್ರೆಗಳಲ್ಲಿ ಒಂದಾಗಿರುವ ಕೊಪ್ಪಳ ಗವಿಮಠದ ಜಾತ್ರೆಯ ಮಹಾರಥೋತ್ಸವ ಇಂದು ಸಂಜೆ 5 ಗಂಟೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಇಶಾ ಫೌಂಡೇಶನ್ ನ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ರಥೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಪ್ರಯಾಣಿಕರ ಮೂತ್ರ ವಿರಸರ್ಜನೆ ಎಫೆಕ್ಟ್: ಏರ್ ಇಂಡಿಯಾದಲ್ಲಿ ಇನ್ಮುಂದೆ ಮದ್ಯ ಸೇವೆ ಬಂದ್?
ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ-2023ರ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಹೆಚ್ಚುವರಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಜನವರಿ 08 ರಂದು ನಡೆಯಲಿರುವ ಶ್ರೀ ಗವಿಸಿದ್ಧೇಶ್ವರ ಜಾತ್ರೆಗೆ ಹೆಚ್ಚಿನ ಜನಸಂದಣಿಯನ್ನು ನಿರೀಕ್ಷಿಸಿ ಕ.ಕ.ರ.ಸಾ ನಿಗಮದಿಂದ ಕೊಪ್ಪಳ ಕೇಂದ್ರ ಬಸ್ ನಿಲ್ದಾಣ ಹಾಗೂ ಕೊಪ್ಪಳದ ಇತರೆ ಕಡೆಗಳಿಂದ ಸಾರ್ವಜನಿಕ ಭಕ್ತಾಧಿಗಳಿಗೆ ಹೆಚ್ಚಿನ ಸಾರಿಗೆ ಸೌಕರ್ಯವನ್ನು ಕಲ್ಪಿಸಲಾಗುರುತ್ತದೆ.
ಬಸ್ ಮಾರ್ಗ ಹಾಗೂ ಹೊರಡುವ ಸ್ಥಳಗಳು: ಗದಗ, ಯಲಬುರ್ಗಾ, ಕುಕನೂರ ಕಡೆಗೆ ಮತ್ತು ಅಳವಂಡಿ, ಮುಂಡರಗಿ ಕಡೆಗೆ, ಈ ಎರಡೂ ಮಾರ್ಗಗಳಿ ಕೊಪ್ಪಳ ಕೇಂದ್ರೀಯ ಬಸ್ನಿಲ್ದಾಣದಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೊಸಪೇಟೆ, ಗಂಗಾವತಿ ಮಾರ್ಗಗಳಿಗೆ ನಗರದ ಹೊಸಪೇಟೆ ರಸ್ತೆಯ ಮಾತಾ ಹೋಟೆಲ್ ಹತ್ತಿರ ಬಸ್ ಹೊರಡುವ ವ್ಯವಸ್ಥೆ ಮಾಡಲಾಗಿದೆ. ಕುಷ್ಟಗಿ ಮಾರ್ಗಕ್ಕೆ ನಗರದ ಕಾಳಿದಾಸ ನಗರದ ಹತ್ತಿರದಲ್ಲಿ ಬಸ್ ಹೊರಡುವ ಸ್ಥಳವನ್ನು ನಿಗದಿಪಡಿಸಲಾಗಿದೆ. ಅಲ್ಲದೇ ಹ್ಯಾಟಿ, ಗೊಂಡಬಾಳ, ಕರ್ಕಿಹಳ್ಳಿ ಕಡೆಗೆ ಹೋಗುವ ಮಾರ್ಗಗಳಿಗೆ ನಗರದ ಗಡಿಯಾರ ಕಂಬದ ಹತ್ತಿರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯ ಸಾರ್ವಜನಿಕರು, ವಿಶೇಷವಾಗಿ ಜಾತ್ರೆಗೆ ಆಗಮಿಸಲಿರುವ ಭಕ್ತಾಧಿಗಳು ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.