ಬೆಂಗಳೂರು : ಕೇಂದ್ರ ಸರ್ಕಾರದ ಸಂಧಾನ ಯಶಸ್ವಿಯಾಗಿದ್ದು, ಅಖಿಲ ಭಾರತ ಬ್ಯಾಂಕ್ ಸಿಬ್ಬಂದಿಗಳ ಒಕ್ಕೂಟ ನವೆಂಬರ್ 19 ರ ಇಂದು ಮುಷ್ಕರವನ್ನು ಹಿಂತೆಗೆದುಕೊಂಡಿದೆ.
ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮತ್ತು ಬ್ಯಾಂಕಿಂಗ್ ಸಂಘಟನೆಗಳ ಪದಾಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬ್ಯಾಂಕ್ , ಬ್ಯಾಂಕ್ ಆಫ್ ಬರೋಡಾ, ಸೆಂಟ್ರಲ್ ಬ್ಯಾಂಕ್ ಮುಂತಾದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಸಿಬ್ಬಂದಿ ಶನಿವಾರ ಮುಷ್ಕರ ನಡೆಸಲು ತೀರ್ಮಾನಿಸಿದ್ದರು.
ಆದರೆ ಶುಕ್ರವಾರ ಸಂಜೆ ಹಣಕಾಸು ಸಚಿವಾಲಯದ ಅಧಿಕಾರಿಗಳು ಮತ್ತು ಬ್ಯಾಂಕ್ ಸಂಘಟನೆಗಳ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಡೆದಿದ್ದು, ಮುಷ್ಕರವನ್ನು ಮುಂದೂಡುವ ತೀರ್ಮಾನಕ್ಕೆ ಬರಲಾಗಿದೆ.