ಬೆಂಗಳೂರು : ಸೇವಾವಧಿಯಲ್ಲಿ ಒಂದು ಬರಿ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಶಿಕ್ಷಕರು ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದು ಮನವಿ ಮಾಡಿದ್ದಾರೆ.

Good News : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ!

ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರು ಒಂದು ಬಾರಿ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಚಿವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಬಿ.ಸಿ.ನಾಗೇಶ್ ಆಯುಕ್ತರಿಗೆ ಪತ್ರ ಬರೆದು ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.

Update : ಯಾದಗಿರಿಯಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 7 ಜನರು ಸ್ಥಳದಲ್ಲೇ ಸಾವು

Share.
Exit mobile version