ಬೆಂಗಳೂರು : ಅಧಿಕಾರಿಗಳಿಗೆ ವರ್ಗಾವಣೆ ಆದೇಶ ಹೊರಡಿಸಿದಾಗ ಅಧಿಕಾರಿಗಳಿಗೆ ಕಡ್ಡಾಯವಾಗಿ ಹೊಸ ಹುದ್ದೆ ತೋರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಹೊಸ ಹುದ್ದೆ ತೋರಿಸದೆ ಅಧಿಕಾರಿಗಳನ್ನು ಹಾಲಿ ಹುದ್ದೆಯಿಂದ ವರ್ಗಾವಣೆ ಮಾಡುವ ಸರ್ಕಾರದ ಧೋರಣೆಯನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ವರ್ಗಾವಣೆ ಸಂಬಂಧ ಸೂಕ್ತ ಕಾರ್ಯವಿಧಾನ ರೂಪಿಸುವಂತೆ 2017ರಲ್ಲೇ ಹೈಕೋರ್ಟ್ ಆದೇಶಿಸಿದ್ದರೂ, ಇದನ್ನು ಪಾಲಿಸದ ಸರ್ಕಾರದ ಕ್ರಮಕ್ಕೂ ನ್ಯಾಯಪೀಠ ಕಿಡಿಕಾರಿದೆ.
Good News : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 7 ಕ್ಕೆ ಎರಡು ಸಾವಿರ ಮನೆಗಳ ಹಸ್ತಾಂತರ
ಚಾಮರಾಜನಗರ ಜಿಲ್ಲೆಯ ಹನೂರು ಪುರಸಭೆ ಮುಖ್ಯ ಅಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ ಮೂರ್ತಿ ಎಂಬುವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಪೀಠ ಈ ಆದೇಶ ಮಾಡಿದೆ.
ಮೂರ್ತಿ ಅವರನ್ನು ವರ್ಗಾವಣೆ ಮಾಡಿ ಆ ಹುದ್ದೆಗೆ ಪರಶಿವಯ್ಯ ಎಂಬುವವರನ್ನು ನಿಯೋಜಿಸಿ 2021ರ ಡಿ.23ರಂದು ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಅರ್ಜಿದಾರರನ್ನು ಡಿ. 23ರ ಆದೇಶಕ್ಕೂ ಮೊದಲಿದ್ದ ಹುದ್ದೆಗೆ ಮರು ನಿಯೋಜಿಸಿದೆ.