ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಬೆಳಗಾವಿಯ ಅನಗೋಳದಲ್ಲಿ ಮನೆ ಕುಸಿದಿರುವ ಘಟನೆ ನಡೆದಿದೆ.
ಬೆಳಗಾವಿಯ ಅನಗೋಳದ ವಾಡಾ ಕಾಂಪೌಂಡಿನ ಅಶೋಕ್ ಬೆಂಡಿಗೇರಿ ಅವರ ಎರಡು ಅಂತಸ್ತಿನ ಮನೆ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ 11 ಜನರು ಅಪಾಯದಿಂದ ಪಾರಾಗಿದ್ದಾರೆ. ಮನೆ ಕುಸಿದಿದ್ದರಿಂದ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ.
ಮಳೆಯಿಂದ ಮನೆಯಲ್ಲಿ ಬಿರುಕು ಬಿಟ್ಟಿದ್ದನ್ನು ಕಂಡು ಮನೆಯ ಸದಸ್ಯರು ಮನೆಯಿಂದ ಹೊರಗಡೆ ಬಂದಿದ್ದರು. ಹೀಗಾಗಿ ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.
BIGG NEWS : ರಾಜ್ಯಾದ್ಯಂತ ವರುಣಾರ್ಭಟ : ಕೃಷ್ಣಾ, ತುಂಗಭದ್ರ ಜಲಾನಯನ ಪ್ರದೇಶಗಳಲ್ಲಿ ಪ್ರವಾಹ ಎಚ್ಚರಿಕೆ