ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇನ್ನೂ ಅಂತಿಮಗೊಂಡಿಲ್ಲ. ಈ ನಡುವೆ ಜನವರಿ 9 ಕ್ಕೆ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
BIG NEWS : ಮುಂದಿನ ತಿಂಗಳಿನಿಂದ ಈ ಕಂಪ್ಯೂಟರ್ಗಳಲ್ಲಿ ʻGoogle Chromeʼ ಕೆಲಸ ನಿರ್ವಹಿಸೋದಿಲ್ಲ… ಕಾರಣ?
ಜನವರಿ 9 ರಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಕೋಲಾರಕ್ಕೆ ಹೋಗಿ ಬಂದಿರುವ ಸಿದ್ದರಾಮಯ್ಯ ಇದೀಗ ಮತ್ತೆ ಕೋಲಾರಕ್ಕೆ ಹೋಗುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಜನವರಿ 9 ರಂದೇ ಕೋಲಾರದಲ್ಲಿ ಅಧಿಕೃತವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡ್ತಾರಾ? ಎಂಬುದು ಕಾದು ನೋಡಬೇಕು.
ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಇನ್ನೂ ಫೈನಲ್ ಆಗಿಲ್ಲ, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ ಬಾರಿ ಅಲ್ಲಿಂದಲೇ ಸ್ಪರ್ಧೆ ಮಾಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ. ಆದರೆ ಇನ್ನೂ ಈ ಬಗ್ಗೆ ಅಧಿಕೃತವಾಗಿ ಎಲ್ಲೂ ಹೇಳಿಲ್ಲ. ಹೀಗಾಗಿ ಈ ಬಾರಿಯ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಕುತೂಹಲ ಮೂಡಿಸಿದೆ.