ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 17 ರ ಇಂದು ರಾಜ್ಯಾದ್ಯಂತ ಎನ್ ಎಸ್ ಯುಐ (NSUI) ವಿಶ್ವವಿದ್ಯಾಲಯಗಳ ಬಂದ್ ಗೆ ಕರೆ ನೀಡಲಾಗಿದೆ.
BIGG NEWS : ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಬೈಕ್ ಖರೀದಿಗೆ 50 ಸಾವಿರ ಸಹಾಯಧನ
ಇಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಹಾಗೂ ಸಂಯೋಜಿತ ಕಾಲೇಜುಗಳ ಬಂದ್ ಗೆ ಕರೆ ನೀಡಲಾಗಿದ್ದು, ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ. ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆಹಲವು ಸಮಸ್ಯೆಗಳನ್ನು ರಾಜ್ಯದ ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ವಿಶ್ವವಿದ್ಯಾಲಯಗಳ ಬಂದ್ ಗೆ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕರೆ ನೀಡಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹೇಳಿದ್ದಾರೆ.