ಬೆಂಗಳೂರು : ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ (Karnataka Institute of Technology) ಯನ್ನಾಗಿ ಉನ್ನತೀಕರಿಸಲು ಹಾಗೂ ಯೋಜನಾ ಅನುಷ್ಠಾನಕ್ಕೆ ಕಾರ್ಯಪಡೆಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಪ್ರಸ್ತುತ ಮೊದಲ ಹಂತವಾಗಿ ರಾಜ್ಯದಲ್ಲಿನ ಹಾಲಿ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು Karnataka Institute of Technology ಗಳನ್ನಾಗಿ ಉನ್ನತೀಕರಿಸಲು ಆದೇಶಿಸಿದೆ.
- ಹಾಸನದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು
2.ಬೆಂಗಳೂರಿನ ಎಸ್ಕೆಎಸ್ಜೆಐಟಿ (SKSJIT)
- ಹಾವೇರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು
4.ಕೆ.ಆರ್.ಪೇಟೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು
- ರಾಮನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು
- ತಳಕಲ್ ಕೊಪ್ಪಳದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು
- ಕಾರವಾರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಉನ್ನತೀಕರಣಕ್ಕಾಗಿ ಗುರುತಿಸಿದೆ.