ಬೆಂಗಳೂರು : ಕೃಷ್ಣ ಮೇಲ್ದಂಡೆ ಯೋಜನೆ ಅಡಿ ಭೂಮಿ ಕಳೆದುಕೊಂಡ ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರಿಗೆ ಪರಿಹಾರದ ಮೊತ್ತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿಸಲು ತೀರ್ಮಾನ ಕೈಗೊಳ್ಲಲಾಗಿದೆ ಎಂದು ತಿಳಿಸಿದ್ದಾರೆ.
BIGG NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ : ಶೀಘ್ರವೇ 128 ಮಹಿಳಾ ಸ್ವಾಸ್ಥ್ಯ ಕೇಂದ್ರ ಸ್ಥಾಪನೆ
ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಮೂರನೇ ಹಂತದ ಕೃಷ್ಣ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ 50 ಸಾವಿರ ಎಕರೆಗೆ ನೀಡಬೇಕಾಗಿರುವ ಪರಿಹಾರದ ಮೊತ್ತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಪ್ರಸ್ತುತ 1.5 ಲಕ್ಷ ರೂ. ಪರಿಹಾರ ಮೊತ್ತ ಇದ್ದು, ಮೂರು ಪಟ್ಟು ಅಂದರೆ 8 ಲಕ್ಷದಷ್ಟು ನೀಡಲು ನಿರ್ಧರಿಸಲಾಗಿತ್ತು. ಆದರೆ ರೈತರು ಇನ್ನೂ ಹೆಚ್ಚಿಸಬೇಕೆಂಬ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪರಿಹಾರ ನೀಡುವ ಕುರಿತು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.
BREAKING NEWS : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವು