ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ದಾವಣಗೆರೆ, ಗದಗ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ.
BIGG NEWS : `CET RANK’ ರದ್ದು : ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಕಾಡುಗೋಡಿ ಬಳಿ ಕೆರೆ ಕೋಡಿ ಒಡೆದಿದ್ದು, ಹಲವು ಮನೆಗಳು, ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಗದಗ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, 500 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನರು ಪರದಾಟ ನಡೆಸಿರುವ ಘಟನೆ ನಡೆದಿದೆ. ಗದಗ ತಾಲೂಕಿನ ಮದಗಾನೂರು ಗ್ರಾಮದಲ್ಲಿ ಹಳ್ಳಗಳ ನೀರು ನುಗ್ಗಿ 500 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ನೀರು ನುಗ್ಗಿದ ಪರಿಣಾಮ ರೈತರ ಮನೆಯಲ್ಲಿದ್ದ ಧಾನ್ಯಗಳು ನೀರುಪಾಲಾಗಿವೆ.
ತುಮಕೂರು ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಕಗ್ಗೆರೆ ತೋಂಟದ ಸಿದ್ದಲಿಂಗೇಶ್ವರ ದೇವಸ್ಥಾನ ಜಲಾವೃತವಾಗಿದೆ. ಕುಣಿಗಲ್ ತಾಲೂಕಿನ ಕಗ್ಗರೆಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.ಸದ್ಯ ಭಕ್ತರು ದೇವಸ್ಥಾನದಲ್ಲಿರುವ ನೀರನ್ನು ಹೊರಗೆ ಹಾಕುತ್ತಿದ್ದಾರೆ.
ಕೋಲಾ ಜಿಲ್ಲೆಯಲ್ಲೂ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಗಿ ಅವಾಂತರ ಸೃಷ್ಟಿಯಾಗಿದ್ದು, ಕೋಲಾರ ಜಿಲ್ಲೆಯ ವಿವಿಧೆಡೆ 15 ಕ್ಕೂ ಹೆಚ್ಚು ಮನೆಗಳು ಕುಸಿದಿವೆ. 252 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ, ತೋಟಗಾರಿಕೆ ಬೆಳೆಗಳು, 100 ಕ್ಕೂ ಹೆಚ್ಚು ರಸ್ತೆಗಳು ಹಾಳಾಗಿವೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆ
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಸೆ. 7ರಿಂದ 9ರವರೆಗೆ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.