ಬೆಂಗಳೂರು : ಉಕ್ರೇನ್-ರಷ್ಯಾ ಬಿಕ್ಕಟ್ಟು ತೀವ್ರವಾಗಿದ್ದು, ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಕುರಿತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನೋಜ್ ರಾಜನ್ ಮಾಹಿತಿ ನೀಡಿದ್ದು, ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ http://ukraine.karnataka.tech ವೆಬ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ವೆಬ್ ಪೋರ್ಟಲ್ ಮೂಲಕ ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ರಾಜ್ಯದ ಜನರ ಅಗತ್ಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಪೋರ್ಟಲ್ನಲ್ಲಿ ಉಕ್ರೇನ್ನಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಂಬಂಧಿಸಿದ ಕೆಲ ದಾಖಲೆಯ ಮಾಹಿತಿಯನ್ನ ನೀಡಬೇಕು. ಉಕ್ರೇನ್ ನಲ್ಲಿ ಸಿಲುಕಿರುವವರ ಜೊತೆಗಿನ ಸಂಬಂಧ, ಸಿಲುಕಿರುವ ಜನರ ಮಾಹಿತಿ ನೀಡಬೇಕು. ವಿದೇಶಾಂಗ ಸಚಿವಾಲಯ ವೆಬ್ಸೈಟ್ ಮಾಹಿತಿ ಹಾಗೂ ಭಾರತ ಸರ್ಕಾರದಿಂದ ಸಂಗ್ರಹಿಸಿದ ಅಗತ್ಯ ಮಾಹಿತಿ ಇರಲಿದೆ.