ಮೈಸೂರು : ವಿಧಾನಸಭೆ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ಚುನಾವಣೆ ಹತ್ತಿರ ಬಂದಾಗ ಈ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
BIGG NEWS : ರಾಜ್ಯಾದ್ಯಂತ ವರುಣಾರ್ಭಟಕ್ಕೆ ಒಂದೇ ವಾರದಲ್ಲಿ 34 ಜನ ಸಾವು!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಗೆ ಎಲ್ಲಿಂದ ಸ್ಪರ್ಧಿಸಬೇಕು ಎಂದು ಇನ್ನೂ ತೀರ್ಮಾನ ಮಾಡಿಲ್ಲ. ವರುಣಾ, ಚಿಂತಾಮಣಿಗೆ ಹೋಗಿದ್ದೆ, ಚಾಮುಂಡೇಶ್ವರಿ ಕ್ಷೇತ್ರಕ್ಕೂ ಹೋಗಿದ್ದೆ ಎಲ್ಲಿಯೂ ಹೋದರೂ ಅಲ್ಲಿಂದ ಸ್ಪರ್ಧಿಸುತ್ತೀರಾ ? ಎಂದು ಕೇಳುತ್ತಾರೆ. ಇನ್ನೂ ಕ್ಷೇತ್ರದ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯವರು ಹರ್ ಘರ್ ತಿರಂಗ ಎಂದು ನಾಟಕವಾಡುತ್ತಿದ್ದಾರೆ. ನಾವು ಗೌರವದಿಂದ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೇವೆ. ಆತ್ಮನಿರ್ಭರ ಎಂದರೇನು?ಆಮದು ಹೆಚ್ಚಾಗಿದೆಯಾ? ರಪ್ತು ಹೆಚ್ಚಾಗಿದೆಯಾ? ಎಂದು ಪ್ರಶ್ನಿಸಿದ್ದಾರೆ.
BIGG NEWS : ಅಮೃತಮಹೋತ್ಸವದಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಮಳೆಹಾನಿ ಬಗ್ಗೆ ಸರ್ವೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಭಾರತದಲ್ಲೂ ಶ್ರೀಲಂಕಾ ಪರಿಸ್ಥಿತಿ ಎದುರಾದ್ರು ಆಶ್ಚರ್ಯವಿಲ್ಲ .ಈಗ ಬಿಜೆಪಿಯವರು ಹರ್ ಘರ್ ತಿರಂಗ ಎಂದು ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನಾ ಸಂಸದ ʻಸಂಜಯ್ ರಾವತ್ʼರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿರುವ ಇಡಿ…