ಶಿವಮೊಗ್ಗ : ರಾಜ್ಯದಲ್ಲಿ ಯೋಗಿ ಮಾಡೆಲ್ ಜಾರಿ ಕುರಿತಂತೆ ಗೃಹ ಸಚಿವ ಅರಗಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ. ನಮಗೆ ನಮ್ಮದೇ ಆದ ಕಾರಣ ಇದೆ ಎಂದು ಹೇಳಿದ್ದಾರೆ.
ಇನ್ನು ಬೆಂಗಳೂರಿನ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಎಬಿವಿಪಿ ಕಾರ್ಯಕರ್ತರು ಎಂದು ಹೇಳಿಕೊಂಡ ಕೆಲವರು ಪ್ರತಿಭಟನೆ ಮಾಡಿದ್ದಾರೆ. ಆ ಬಗ್ಗೆ ಗಮನ ಹರಿಸುವಂತೆ ನಾನು ಪೊಲೀಸರರಿಗೆ ಹೇಳಿದ್ದೇನೆ. ಅವರು ಎಬಿವಿಪಿ ಕಾರ್ಯಕರ್ತರೇ ಆಗಿದ್ದರೆ ನಾನು ಅವರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರ ನಿಮ್ಮ ಭಾವನೆಯನ್ನು ಅರ್ಥ ಮಾಡಿಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
ರೈತರೇ ಗಮನಿಸಿ : `ರೈತಶಕ್ತಿ’ ಯೋಜನೆಯಡಿ ಪ್ರತಿ ಎಕರೆಗೆ 250 ರೂ. ಡೀಸೆಲ್ ಸಹಾಯಧನ