ಬೆಂಗಳೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಕಾವೇರಿ ನದಿಯ ಹೆಸರು ನಾಮಕರಣ ಮಾಡಬೇಕೆಂದು ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಶಾಸಕರಾದ ಮಧು ಜಿ. ಮಾದೇಗೌಡ ಅವರು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಕಾವೇರಿ ನದಿ, ಒಡೆಯರ್ ಹೆಸರಿಗೆ ಪ್ರತ್ಯೇಕ ಶಿಫಾರಸ್ಸು. ಕಾವೇರಿ ನದಿ ಹೆಸರಿಡಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿರುವ ಸಂಸದ ಪ್ರತಾಪ್ ಸಿಂಹ. ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದಾರೆ.