ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಜನೋತ್ಸವ ಸಮಾವೇಶ ಕಾರ್ಯಕ್ರಮವನ್ನು ಎಲ್ಲರ ಜೊತೆ ಚರ್ಚಿಸಿ ರದ್ದುಗೊಳಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿಅಗತ್ಯ ಬಿದ್ದರೆ ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್ ಮಾದರಿಯ ಸರ್ಕಾರ ತರುತ್ತೇವೆ. ಕೋಮುಭಾವನೆ ಕದಡುವ ಶಕ್ತಿಗಳನ್ನು ಸೆದೆಬಡೆಯುತ್ತೇವೆ. ಬಾಯಿ ಮಾತಿನಲ್ಲಿ ಅಲ್ಲ. ಕಠಿಣ ಕ್ರಮ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕ್ರಮ ಕೈಗೊಂಡಿದ್ದೇವೆ. ಉಗ್ರ ಸಂಗಟನೆಗಳ ಜೊತೆ ಸಂಪರ್ಕದಲ್ಲಿರುವವ ವಿರುದ್ಧ ಕ್ರಮಕೈಗೊಳ್ಳಲಾಗಿದೆ.ಅಂತಹವನ್ನು ತಿಹಾರ್ ಜೈಲಿಗೆ ಕಳಿಸಲಾಗಿದೆ ಎಂದರು.
BIGG NEWS : ರಾಜ್ಯದಲ್ಲಿ `PFI’ ಸಂಘಟನೆ ನಿಷೇಧ ಮಾಡುವ ಕುರಿತಂತೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಸರ್ಕಾರ ನಡೆಸಲು ಅವಕಾಶ ಕೊಟ್ಟ ವರಿಷ್ಠರಿಗೆ ಧನ್ಯವಾದ ಹೇಳಿದರು. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ನಿಯಂತ್ರಣಕ್ಕೆ ಬಂದ ಮೇಲೆ ನಾನು ಅಧಿಕಾರ ವಹಿಸಿಕೊಂಡೆ. ಯಡಿಯೂರಪ್ಪ ಸಮರ್ಥವಾಗಿ ಕೋವಿಡ್ ನಿರ್ವಹಿಸಿದ್ದರು.
BIGG NEWS : ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಕರೆದ ಅಧೀರ್ ಚೌಧರಿ, ಕ್ಷಮೆಯಾಚಿಸಲು ಬಿಜೆಪಿ ಆಗ್ರಹ
8.5 ಲಕ್ಷ ಕಳೆದ ವರ್ಷ ರೈತ ವಿದ್ಯಾರ್ಥಿಗಳು ವಿದ್ಯಾನಿಧಿ ಪಡೆದುಕೊಂಡಿದ್ದರು. 9.98 ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ತಲುಪಿದೆ. ರೈತ ಮಕ್ಕಳಿಗೆ ಇದರಿಂದ ಭರವಸೆ ಮೂಡಿದೆ. ಸಂಧ್ಯಾ ಸುರಕ್ಷಾ ಮಾಸಾಶನ ಎಲ್ಲ ಹೆಚ್ಚು ಮಾಡಿ ಆರ್ಥಿಕ ಆಸರೆ ನೀಡಲಾಗಿದೆ. ಬಡವರಿಗೆ ವಯಸ್ಸಾದವರಿಗೆ ಅಂಗವಿಕಲರಿಗೆ ಕೊಟ್ಟಿದ್ದೇವೆ. ಇತ್ತೀಚೆಗೆ ಎಸ್ಸಿ.ಎಸ್ಟಿ ಸಮುದಾಯಕ್ಕೆ ಯೋಜನಗೆಳನ್ನು ಹೆಚ್ಚಳ ಮಾಡಿದ್ದೇವೆ. 25 ಲಕ್ಷಕ್ಕೂ ಹೆಚ್ಚಿನ ಕುಟುಂಬಗಳಿಗೆ ಪುಕ್ಕಟೆ ವಿದ್ಯುತ್ ನೀಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.