ರಾಯಚೂರು : ರಾಯಚೂರನ್ನು ತೆಲಂಗಾಣಕ್ಕೆ ಸೇರಿಸಿ ಎಂದು ತೆಲಂಗಾಣ ಸಿಎಂ ಕೆ.ಸಿ. ಚಂದ್ರಶೇಖರ್ ರಾವ್ ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
New Rule From 1st September : ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಸಿ. ಚಂದ್ರಶೇಖರ್ ರಾವ್ ಅವರು ಮೊದಲು ತೆಲಂಗಾಣವನ್ನು ಉದ್ದರಿಸಲಿ, ರಾಯಚೂರು ಅಷ್ಟೇ ಅಲ್ಲ, ರಾಜ್ಯದ ಒಂದಿಂಚೂ ಭೂಮಿಯನ್ನು ಬಿಟ್ಟುಕೊಡುವ ಮಾತೇ ಇಲ್ಲ. ತೆಲಂಗಾಣ ಸಿಎಂ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಹೇಳಿದ್ದಾರೆ.
ತೆಲಂಗಾಣ ಹಿಂದುಳಿದೆ ಎಂದು ಹೇಳಿ ಪ್ರತ್ಯೇಕ ರಾಜ್ಯ ಪಡೆದಿರುವ ಅವರು ಮುಖ್ಯಮಂತ್ರಿ ಆಗಿ ಅಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ತಮ್ಮ ಸಮಸ್ಯೆಗಳನ್ನು ಮುಚ್ಚಿಕೊಳ್ಳುವುದಕ್ಕಾಗಿ ಈ ರೀತಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS : ಸಿರಿಧಾನ್ಯ ಹಬ್ ಆಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್