ಧಾರವಾಡ: ಶೀಘ್ರದಲ್ಲಿಯೇ 900 ಪಿಎಸ್ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಅಂತ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಅವರು ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಇದೇ ವೇಳೆ ಅವರು ಮಾತನಾಡಿ, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು ಅನುಕರಣೀಯ ಸಂಗತಿಯಾಗಿದೆ.ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು.ಈಗ ವಾರ್ಷಿಕ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ.ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ.ಶೀಘ್ರದಲ್ಲಿಯೇ 900 ಪಿಎಸ್ಐಗಳ ನೇಮಕಾತಿ ನಡೆಯಲಿದೆ.ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.ಪೊಲೀಸ್ ಇಲಾಖೆಗೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು.ಹುಬ್ಬಳ್ಳಿ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತರುವ ಮೂಲಕ ಇಲ್ಲಿನ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಇದೇ ವೇಳೆ ಗಣಿ,ಭೂವಿಜ್ಞಾನ ,ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ,ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,ಪ್ರದೀಪ ಶೆಟ್ಟರ್,ಎಸ್.ವಿ.ಸಂಕನೂರ,ಶಾಸಕರಾದ ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ,ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ,ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ರಾಜೇಶ ಕೋಟೆಣ್ಣವರ,ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ್ ಈರೇಶ ಅಂಚಟಗೇರಿ,ಉಪಮೇಯರ್ ಉಮಾ ಮುಕುಂದ್,ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್,ಎಡಿಜಿಪಿ ಅರುಣ ಚಕ್ರವರ್ತಿ, ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕ,ಎನ್.ಸತೀಶಕುಮಾರ,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ,ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಬಿ.ಜಗಲಾಸರ್,ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್,ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ,ಜಿಪಂ ಸಿಇಓ ಡಾ.ಸುರೇಶ ಇಟ್ನಾಳ,ಕೆಎಸ್ಪಿಹೆಚ್ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಬಿ.ಎಸ್.ಮತ್ತಿತರರು ವೇದಿಕೆಯಲ್ಲಿದ್ದರು.