ಚಿಕ್ಕಬಳ್ಳಾಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದೇ ಸೂರಿನಡಿ  ಹಲವು  ಅವಕಾಶ ಕಲ್ಪಿಸುವ ಇ-ಶ್ರಮ್ ಯೋಜನೆಯಡಿ ನೋಂದಣಿ ಮಾಡಿಸುವಂತೆ ಸೂಚಿಸಲಾಗಿದೆ.

BREAKING NEWS : `ನಮ್ಮ ರಾಜ್ಯದ ಗಡಿ ಜನರನ್ನು ಉಳಿಸಿಕೊಳ್ಳುವುದು ಗೊತ್ತಿದೆ’ : ಮಹಾರಾಷ್ಟ್ರ ಗಡಿ ಕ್ಯಾತೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಅರ್ಹ ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ಇ.ಎಸ್.ಐ ಮತ್ತು ಪಿ.ಎಫ್ ಸದಸ್ಯರಾಗಿರದ ಹಾಗೂ ಆದಾಯ ತೆರಿಗೆ ಪಾವತಿಸದ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ “ಇತರೆ ವರ್ಗಗಳ” ಅಸಂಘಟಿತ ಕಾರ್ಮಿಕರು ಕಾಮನ್ ಸರ್ವೀಸ್ ಸೆಂಟರ್ (ಸಿ.ಎಸ್.ಸಿ) ಮೂಲಕ  ಅಥವಾ ಆನ್ಲೈನ್ ನಲ್ಲಿ   ಸ್ವಯಂ ನೋಂದಣಿ ಆಗಬಹುದು ಅಥವಾ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ ಸದರಿ ಯೋಜನೆಯಡಿ ನೋಂದಾಯಿಸಿ ಈ  ಯೋಜನೆಯ  ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

 ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ನೋಂದಣಿಗೆ ಸಂಬಂಧಿಸಿದಂತೆ ಇ-ಶ್ರಮ್ ಯೋಜನೆಯಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ದರ್ಜಿಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ರಿಕ್ಷಾ ಎಳೆಯುವವರು, ಬಿಸಿ ಊಟ ಕಾರ್ಮಿಕರು, ನರೇಗಾ ಕಾರ್ಮಿಕರು, ಇಟ್ಟಿಗೆ ಮಾಡುವವರು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 156 ವರ್ಗಗಳ ಕಾರ್ಮಿಕರು ಹಾಗೂ ಪಟ್ಟಿಯಲ್ಲಿ ಸೇರಿರದ ಅಸಂಘಟಿತ ಕಾರ್ಮಿಕರು “ಇತರೆ ವರ್ಗ”ಗಳಡಿ ನೋಂದಣಿಯಾಗಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.

ಇ-ಶ್ರಮ್ ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ಅಸಂಘಟಿತ ಕಾರ್ಮಿಕರಾಗಿರಬೇಕು, ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇಎಸ್‌ಐ ಫಲಾನುಭವಿಯಾಗಿರಬಾರದು. 16 ರಿಂದ 59 ವಯೋಮಾನದವರಾಗಿರಬೇಕು. ಸದರಿ ಯೋಜನೆಯಡಿ ನೊಂದಣಿಯಾಗಲು ಅವಶ್ಯಕ ದಾಖಲೆಗಳು ಆಧಾರ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳು ನೀಡಬೇಕು.

ಇ-ಶ್ರಮ್ ಯೋಜನೆಯ ಪ್ರಯೋಜನೆಗಳು

ಸಾಮಾಜಿಕ  ಭದ್ರತೆ ಮತ್ತು ಹಾಗೂ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುಕೂಲ. ದತ್ತಾಂಶವು ಸರ್ಕಾರಕ್ಕೆ ಅಸಂಘಟಿತ ಕಾರ್ಮಿಕರಿಗೆ ವಿಶೇಷ ನೀತಿಗಳು ಹಾಗೂ ಯೋಜನೆಗಳನ್ನು ರೂಪಿಸಲು ಸಹಾಯಕ. ಇ-ಶ್ರಮ್‌ನಲ್ಲಿ ನೊಂದಾಯಿಸಿಕೊಂಡರೆ ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ  ಅಂಗವೈಕಲ್ಯ  ಹೊಂದಿದಲ್ಲಿ ರೂ.2 ಲಕ್ಷ ರೂ ಹಾಗೂ ಭಾಗಶಃ ಅಂಗವೈಕಲ್ಯಕ್ಕೆ ರೂ.1 ಲಕ್ಷ ರೂ ಪರಿಹಾರ ಪಡೆಯಬಹುದಾಗಿರುತ್ತದೆ. ರಾಷ್ಟ್ರೀಯ ವಿಪತ್ತು ಅಥವಾ ಕೋವಿಡ್-19ರ ಸಾಂಕ್ರಾಮಿಕ ಪಿಡುಗಿನಂತಹ ಪರಿಸ್ಥಿತಿಯಲ್ಲಿ ಅರ್ಹ ಕಾರ್ಮಿಕರಿಗೆ ನೆರವು ನೀಡಲು ಸಹ  ದತ್ತಾಂಶವನ್ನು ಬಳಸಿಕೊಳ್ಳಬಹುದಾಗಿದೆ.

ಇ-ಶ್ರಮ್ ನೊಂದಣಿಯು ಉಚಿತವಾಗಿದ್ದು, ನೋಂದಣಿಗಾಗಿ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‌ಸಿ) ಭೇಟಿ ಮಾಡುವುದು ಅಥವಾ ಇ-ಶ್ರಮ್ ಪೋರ್ಟಲ್ www.eshram.gov.in  ನಲ್ಲಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು ಹಾಗೂ ನೊಂದಾಯಿತ ಕಾರ್ಮಿಕರು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು (UAN) ಪಡೆಯಬಹುದಾಗಿದ್ದು, ಇದು ದೇಶದಾದ್ಯಂತ ಹಾಗೂ ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಎಲ್ಲಾ ಅರ್ಹ ಅಸಂಘಟಿತ ಕಾರ್ಮಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳು (CSC) ಗಳಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ಇ-ಶ್ರಮ್ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ನೊಂದಣಿ ಮಾಡಿಸಿ,

ಹೆಚ್ಚಿನ ಮಾಹಿತಿಗಾಗಿ: ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ; ಜಿಎ-3, ನೆಲಮಹಡಿ. ಜಿಲ್ಲಾಡಳಿತ ಭವನ, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ ಹಾಗೂ ಎಲ್ಲಾ ತಾಲ್ಲೂಕು ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರುಗಳ ಕಚೇರಿ ಹಾಗೂ ಕಾರ್ಮಿಕ ಸಹಾಯವಾಣಿ-155214, ಇ-ಶ್ರಮ್ ಸಹಾಯವಾಣಿ-14434 ಗೆ ಸಂಪರ್ಕಿಸಬಹುದು.

Share.
Exit mobile version